ಬೆಂಗಳೂರು,ಜು 30 (Daijiworld News/MSP): ವಿಶ್ವ ಮೀನುಗಾರಿಕೆ ಕೃಷಿ ದಿನಾಚರಣೆ ಅಂಗವಾಗಿ ಗುರುವಾರ ಮುಖ್ಯ ಮಂತ್ರಿಗ ಬಿ.ಎಸ್ ಯಡಿಯೂರಪ್ಪ ರವರು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಮೀನುಗಾರಿಕೆ ಇಲಾಖೆಯ ಕ್ರಿಯಾ ಯೋಜನೆಯನ್ನು ಬಿಡುಗಡೆಗೊಳಿಸಿದರು.
ಮೀನುಗಾರಿಕೆಯಲ್ಲಿ ನಿರತರಾಗಿದ್ದ ವೇಳೆ ಮೃತಪಟ್ಟ ಮೀನುಗಾರರಿಗೆ ಸಂಕಷ್ಟ ಪರಿಹಾರ ನಿಧಿಯಿಂದ ಮಂಜೂರುಗೊಂಡ ತಲಾ 6 ಲಕ್ಷದ ಚೆಕ್ ಗಳನ್ನು ಸಾಂಕೇತಿಕವಾಗಿ ಇಬ್ಬರು ಮೀನುಗಾರರ ಕುಟುಂಬದ ಸದಸ್ಯರಿಗೆ ವಿತರಿಸಲಾಯಿತು.
ಮೀನುಗಾರಿಕೆ ಹಾಗೂ ಬಂದರು ಇಲಾಖೆಯು ಮೂಲಕ ಮೀನುಗಾರಿಕೆಯ ಸಮಗ್ರ ಅಭಿವೃದ್ಧಿಗೆ ಕಾರ್ಯೋನ್ಮುಖರಾಗಿರುವ ಮಾನ್ಯ ಮುಖ್ಯಮಂತ್ರಿಗಳಿಗೆ ಕರಾವಳಿ ಜಿಲ್ಲೆಗಳ ಮೀನುಗಾರರ ಪರವಾಗಿ ಬೆಳ್ಳಿಯ_ಮೀನು_ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಕಂದಾಯ ಸಚಿವರಾದ ಆರ್ ಅಶೋಕ್, ನಗರಾಭಿವೃದ್ಧಿ ಸಚಿವರಾದ ಭೈರತಿ ಬಸವರಾಜ್, ಮೀನುಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್, ಉಡುಪಿ ಶಾಸಕರಾದ ಕೆ ರಘುಪತಿ ಭಟ್, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷರಾದ ಯಶ್ ಪಾಲ್ ಸುವರ್ಣ ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.