ನವದೆಹಲಿ, ಜು. 31 (DaijiworldNews/MB) : ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಅಸ್ವಸ್ಥರಾಗಿದ್ದು ಗುರುವಾರ ಸಂಜೆ 7 ಗಂಟೆಯ ಸುಮಾರಿಗೆ ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೋನಿಯಾ ಗಾಂಧಿ ಅವರಿಗೆ 73 ವರ್ಷ ಪ್ರಾಯವಾಗಿದ್ದು ಕಳೆದ ಫೆಬ್ರವರಿಯಲ್ಲಿ ಇದೇ ಆಸ್ಪತ್ರೆಗೆ ದಾಖಲಾಗಿದ್ದರು.
ಈ ಬಗ್ಗೆ ಪ್ರಕಟನೆಯಲ್ಲಿ ತಿಳಿಸಿರುವ ಗಂಗಾರಾಮ್ ಆಸ್ಪತ್ರೆಯ ಅಧ್ಯಕ್ಷ ಡಾ. ಡಿಎಸ್ ರಾಣಾ, ಕೆಲವು ಪರೀಕ್ಷೆಗಳನ್ನು ಮಾಡಿಸಿಕೊಳ್ಳುವ ನಿಟ್ಟಿನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ. ಕೆಲವೊಂದು ಪರೀಕ್ಷೆಗಳನ್ನು ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.