ಬೆಂಗಳೂರು, ಜು 31(Daijiworld News/MSP): ಕೋವಿಡ್ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ 2000 ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ಆರೋಪಿಸಿದ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರಿಗೆ ಬಿಜೆಪಿ ಲೀಗಲ್ ನೋಟಿಸ್ ರವಾನಿಸಿದೆ.
ಕೆಲ್ದಿನಗಳ ಹಿಂದೆ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪತ್ರಿಕಾಗೋಷ್ಟಿನಡೆಸಿ, ರಾಜ್ಯ ಸರ್ಕಾರ ಕೊರೊನಾ ಹೆಸರಿನಲ್ಲಿ ಸುಮಾರು 2000 ಕೋಟಿ ಭ್ರಷ್ಟಾಚಾರವೆಸಗಿದೆ ಎಂದು ಗಂಭೀರ ಆರೋಪ ಮಾಡಿದ್ದರು.
ರಾಜ್ಯ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ, ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಹಾಗೂ ಅಶ್ವತ್ಥ ನಾರಾಯಣ, ಅವರು " ಕಾಂಗ್ರೆಸ್ ಮುಖಂಡರು ಸರ್ಕಾರದ ಮೇಲೆ ವ್ಯರ್ಥ ಆರೋಪ ಮಾಡುತ್ತಿದ್ದಾರೆ. ಯಾವುದೇ ಹುರುಳಿಲ್ಲದ ಆರೋಪದಿಂದ ರಾಜ್ಯ ಸರ್ಕಾರಕ್ಕೆ ಮಸಿ ಬಳಿಯುವ ಕೆಲಸ ಮಾಡಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರು 15 ದಿನದೊಳಗಾಗಿ ರಾಜ್ಯದ ಜನತೆಯಲ್ಲಿ ಬಹಿರಂಗವಾಗಿ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಕಾನೂನು ಹೋರಾಟ ಮುಂದುವರಿಸಲಾಗುವುದು ಎಂದು ತಿಳಿಸಿದ್ದಾರೆ.
ಕೋವಿಡ್ 19 ಉಪಕರಣಗಳ ಖರೀದಿಯಲ್ಲಿ ರಾಜ್ಯ ಸರಕಾರ ಅವ್ಯವಹಾರ ನಡೆದಿದೆ. ಒಟ್ಟು ಎರಡು ಸಾವಿರ ಕೋಟಿ ರೂ. ಅವ್ಯವಹಾರ ಆಗಿದೆ ಎಂದು ಕಾಂಗ್ರೆಸ್ ಕಳೆದ ವಾರ ಆರೋಪಿಸಿತ್ತು.