ನವದೆಹಲಿ, ಜು 31 (DaijiworldNews/PY): ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಆಗಸ್ಟ್ 1ರಂದು ಸಂಜೆ 4.30ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಲಿದ್ದಾರೆ.
ಕೇಂದ್ರ ಸಂಪುಟದಿಂದ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಮೋದನೆ ದೊರೆತಿದ್ದು, ಪ್ರಧಾನಿ ಮೋದಿ ಅವರು ಈ ವಿಚಾರವಾಗಿ ಭಾಷಣ ಮಾಡಲಿದ್ದಾರೆ ಎಂದು ಮಾನವ ಸಂಪನ್ಮೂಲ ಅಭಿವೃದ್ದಿ ಇಲಾಖೆ ಮಾಹಿತಿ ನೀಡಿದೆ.
ಆಗಸ್ಟ್ 1ರಿಂದ ಅನ್ಲಾಕ್ 3.0 ಜಾರಿಯಾಗಲಿದ್ದು, ಪ್ರಧಾನಿ ಮೋದಿ ಅವರು ಈ ಸಂದರ್ಭದಲ್ಲೇ ಭಾಷಣ ಮಾಡುತ್ತಿರುವ ವಿಚಾರ ಹೆಚ್ಚು ಪ್ರಾಮುಖ್ಯತೆ ಗಳಿಸಿದೆ.
34 ವರ್ಷಗಳ ಬಳಿಕ ಕೇಂದ್ರ ಸರ್ಕಾರವು ಹೊಸ ಶಿಕ್ಷಣ ನೀತಿಗೆ ಅನುಮತಿ ನೀಡಿದೆ. ಮಾತೃಭಾಷೆಯಲ್ಲೇ ಪ್ರಾಥಮಿಕ ಶಿಕ್ಷಣದ ಮಾಧ್ಯಮವಾಗಬೇಕೆನ್ನುವುದು ಹೊಸ ಶಿಕ್ಷಣ ನೀತಿಯ ಮುಖ್ಯ ಉದ್ದೇಶವಾಗಿದೆ. ಹೊಸ ಶಿಕ್ಷಣ ನೀತಿಯ ಮಹತ್ವ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಆಗುವ ಬದಲಾವಣೆಯನ್ನು ದೇಶದ ಜನತೆಗೆ ತಿಳಿಸಲು ಪ್ರಧಾನಿ ಮೋದಿ ಅವರು ಭಾಷಣ ಮಾಡಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.