ಬೆಂಗಳೂರು, ಜು 31(Daijiworld News/MSP): ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಭಾಸ್ಕರ್ ರಾವ್ ಅವರನ್ನು ವರ್ಗಾವಣೆ ಮಾಡಿ, ಅವರ ಸ್ಥಾನಕ್ಕೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಕಮಲ್ ಪಂಥ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು ನಗರ ಪೊಲೀಸ್ ಕಮೀಷನರ್ ಆಗಿದ್ದಂತ ಭಾಸ್ಕರ್ ರಾವ್ ವರನ್ನುಅವರನ್ನು ಆಂತರಿಕ ಭದ್ರತಾ ವಿಭಾಗದ ಎಡಿಜಿಪಿಯಾಗಿ ಸರ್ಕಾರ ನೇಮಿಸಿದೆ.
ಕಮಲ್ ಪಂತ್ ಅವರ ವರ್ಗಾವಣೆ ಕಾರಣದಿಂದ ಗುಪ್ತದಳ ವಿಭಾಗದ ಹೆಚ್ಚುವರಿ ಪೊಲೀಸ್ಮ ಹಾನಿರ್ದೇಶಕರನ್ನಾಗಿ ಬಿ. ದಯಾನಂದ ಅವರನ್ನು ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.