ಬೆಂಗಳೂರು, ಜು. 31 (DaijiworldNews/SM): ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಶುಕ್ರವಾರದಂದು ಮತ್ತೆ ಐದು ಸಾವಿರಕ್ಕೂ ಅಧಿಕ ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
ಶುಕ್ರವಾರ 5483 ಮಂದಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ. ಆ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,24,115ಕ್ಕೆ ಏರಿಕೆಯಾಗಿದೆ. ಇನ್ನು ರಾಜ್ಯದಲ್ಲಿ ಇಂದು ಮತ್ತೆ 84 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಆ ಮೂಲಕ ಸಾವಿನ ಸಂಖ್ಯೆ 2314ಕ್ಕೆ ಏರಿಕೆಯಾಗಿದೆ.
ಇದರ ಜೊತೆಗೆ ಸೋಂಕಿನಿಂದ ಚೇತರಿಸಿಕೊಳ್ಳುತ್ತಿರುವವ ಸಂಖ್ಯೆಯೂ ಕೂಡ ಉತ್ತಮವಾಗಿದೆ. ದಿನವೊಂದರಲ್ಲಿ 3130 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಳ್ಳುತ್ತಿದ್ದಾರೆ. ಪ್ರಸ್ತುತ 72,005 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ವರದಿ ಮಾಡಿದೆ.