ಪೂಂಚ್, ಆ 01 (DaijiworldNews/PY): ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿ ಜಮ್ಮು-ಕಾಶ್ಮೀರದ ಪೂಂಚ್ ಗಡಿ ನಿಯಂತ್ರಣ ಬಳಿ ಅಪ್ರಚೋದಿತ ದಾಳಿ ನಡೆಸಿದ್ದು, ಓರ್ವ ಭಾರತೀಯ ಸೈನಿಕ ಹುತಾತ್ಮರಾಗಿದ್ದಾರೆ ಎಂದು ಶನಿವಾರ ತಿಳಿದುಬಂದಿದೆ.
ಪಾಕಿಸ್ತಾನ ಸೇನೆಯು, ಪೂಂಚ್ನ ಬಾಲಕೋಟ್ ಸೆಕ್ಟರ್ ಸಮೀಪದ ಗಡಿ ನಿಯಂತ್ರಣ ರೇಖೆ ಬಳಿ ಭಾರತೀಯ ಸೈನ್ಯದ ಯೋಧರನ್ನು ಗುರಿಯಾಗಿಟ್ಟುಕೊಂಡು ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ದಾಳಿಗೆ ಗಡಿಯಲ್ಲಿ ಭದ್ರತೆಗೆ ನಿಯೋಹನೆಯಾಗಿದ್ದ ಭಾರತೀಯ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.
ಪಾಕ್ ಸೇನೆಯು ಬುಧವಾರ ಕೂಡಾ ಬಾರಾಮುಲ್ಲಾ ಗಡಿ ನಿಯಂತ್ರಣ ರೇಖೆಯ ಸಮೀಪ ಕದನ ವಿರಾಮ ಉಲ್ಲಂಘಿಸಿ ಭಾರತೀಯ ಸೇನಾಪಡೆಯ ಮೇಲೆ ಗುಂಡಿನ ದಾಳಿ ಮಾಡಿತ್ತು.