ನವದೆಹಲಿ, ಆ. 02 (DaijiworldNews/MB) : ಬಿಜೆಪಿಯ ಹಿರಿಯ ನಾಯಕರಾದ ಎಲ್ ಕೆ ಅಡ್ವಾಣಿ ಹಾಗೂ ಮುರುಳಿ ಮನೋಹರ್ ಜೋಶಿ ಅವರಿಗೆ ರಾಮ ಮಂದಿರ ಭೂಮಿ ಪೂಜೆಗೆ ಆಹ್ವಾನಿಸಿಲ್ಲ ಎಂಬ ಸುದ್ದಿಯಾಗುತ್ತಿದ್ದಂತೆ ಇಬ್ಬರಿಗೂ ದೂರವಾಣಿ ಕರೆಯ ಮೂಲಕ ಆಹ್ವಾನಿಸಿಲಾಗಿದ್ದು ವಿಡಿಯೋ ಕಾನ್ಫರೆನ್ಸ್ ಮೂಲಕ ಆಗಸ್ಟ್ 5 ರಂದು ನಡೆಯಲಿರುವ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವರದಿಯಾಗಿದೆ.
ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಹಿರಿಯ ಮುಖಂಡ ಎಲ್ಕೆ.ಅಡ್ವಾಣಿ ಸೇರಿದಂತೆ 13 ಜನರ ಮೇಲೆ ಬಾಬರಿ ಮಸೀದಿ ಕೆಡವಲು ಸಂಚು ಆರೋಪವಿದೆ. ಈ ಪ್ರಕರಣದ ಪ್ರಮುಖ ಆರೋಪಿಗಳಾದ ಕೇಂದ್ರದ ಮಾಜಿ ಸಚಿವೆ ಉಮಾಭಾರತಿ ಹಾಗೂ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರಿಗೆ ಈಗಾಗಲೇ ಆಹ್ವಾನ ಪತ್ರಿಕೆ ಕಳುಹಿಸಲಾಗಿದ್ದು ಆದರೆ ರಾಮ ಜನ್ಮಭೂಮಿ ಹೋರಟದ ಮುಖ್ಯ ನೇತಾರರಾದ ಎಲ್ ಕೆ ಅಡ್ವಾಣಿ ಹಾಗೂ ಮುರುಳಿ ಮನೋಹರ್ ಜೋಶಿ ಅವರಿಗೆ ಆಹ್ವಾನ ನೀಡಿಲ್ಲ ಎಂಬುದು ಸುದ್ದಿಯಾಗಿತ್ತು. ಈಗ ದೂರವಾಣಿ ಕರೆಯ ಮೂಲಕ ಆಹ್ವಾನಿಸಲಾಗಿದ್ದು ಇಬ್ಬರು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗಿಯಾಗಲಿದ್ದಾರೆ.
ಆಗಸ್ಟ್ 5 ರಂದು ನಡೆಯಲಿರುವ ಭೂಮಿ ಪೂಜೆ ಸಮಾರಂಭಕ್ಕಾಗಿ ಅದ್ದೂರಿ ಸಿದ್ಧತೆ ಮಾಡಲಾಗುತ್ತಿದೆ. ಶಂಕು ಸ್ಥಾಪನೆ ದಿನ 40 ಕೆಜಿ ಬೆಳ್ಳಿಯ ಇಟ್ಟಿಗೆಗಳನ್ನು ಇಡಲಾಗುತ್ತಿದ್ದು, ಕೊರೋನಾ ನಿರ್ಬಂಧದಿಂದಾಗಿ 50 ಮಂದಿ ಗಣ್ಯರನ್ನು ಆಹ್ವಾನಿಸಿರುವುದಾಗಿ ಟ್ರಸ್ಟ್ ತಿಳಿಸಿದೆ.