ಬೆಂಗಳೂರು, ಅ 02(DaijiworldNews/HR): ರಾಜ್ಯದ ಮುಖ್ಯಮಂತ್ರಿ, ಸಚಿವರು ಜನರಿಗೆ ಮೋಸ ಮಾಡುತ್ತಿದ್ದಾರೆ. ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯದ ಪಾಲನ್ನು ಪಡೆದುಕೊಳ್ಳುವುದು ರಾಜ್ಯ ಸರ್ಕಾರದ ಜವಾಬ್ದಾರಿ. ಆದರೆ ಈ ಬಗ್ಗೆ ಪ್ರಶ್ನಿಸುವ ಧೈರ್ಯ ಯಾರೊಬ್ಬರಿಗೂ ಇಲ್ಲವೇ? ಎಂದು ಬಿಜೆಪಿ ಸಂಸದರು, ಸರ್ಕಾರದ ಸಚಿವರನ್ನು ಪ್ರಶ್ನಿಸಿದ್ದಾರೆ.
ಕೊರೋನಾದಿಂದಾಗಿ ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಇದರ ನಡುವೆ ಕೇಂದ್ರ ಸರ್ಕಾರವು -GST ಪರಿಹಾರದ 2 ಕಂತನ್ನು ರಾಜ್ಯಕ್ಕೆ ನೀಡಲು ಸಾಧ್ಯವಿಲ್ಲ ಎಂದಿದೆ. 15 ನೇ ಹಣಕಾಸು ಆಯೋಗದಿಂದ ರಾಜ್ಯದ ತೆರಿಗೆ ಪಾಲಿನಲ್ಲಿ 9,000 ಕೋಟಿ ರೂ. ಖೋತಾ ಮಾಡಿದೆ. ತನ್ನ ಪ್ರಾಯೋಜಿತ ರಾಜ್ಯ ಯೋಜನೆಗಳಿಗೂ ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ಪ್ರಿಯಾಂಕ ಖರ್ಗೆ ಗುಡುಗಿದ್ದಾರೆ.
ಟ್ವೀಟರ್ ನಲ್ಲಿ ತಮ್ಮ ಆಕ್ರೋಷ ವ್ಯಕ್ತಪಡಿಸಿರುವ ಅವರು, ರಾಜ್ಯ ಸರ್ಕಾರ ಆರ್ಥಿಕ ಸಂಕಷ್ಟದಲ್ಲಿದೆ. ಇಂತಹ ಸಂದರ್ಭದಲ್ಲಿ ಕೇಂದ್ರ ಸರ್ಕಾರ ರಾಜ್ಯದ ಪಾಲಿನ ಜಿಎಸ್ ಟಿ ಪರಿಹಾರದ ಹಣವನ್ನು ನೀಡಲು ಹಿಂದೇಟು ಹಾಕಿದೆ. 15ನೇ ಹಣಕಾಸು ಆಯೋಗ ದಿಂದ ರಾಜ್ಯಕ್ಕೆ 9000 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.