ಬಹರಾಯಿಚ್: ನೇಪಾಳವು ಮೂರು ಅಣೆಕಟ್ಟಿನಿಂದ ಹೆಚ್ಚುವರಿಯಾಗಿದ್ದ ನೀರನ್ನು ನದಿಗಳಿಗೆ ಬಿಟ್ಟ ಕಾರಣ ಕಾರಣ ಉತ್ತರ ಪ್ರದೇಶದ ಬಹರಾಯಿಚ್ ಜಿಲ್ಲೆಯ 60ಕ್ಕೂ ಅಧಿಕ ಹಳ್ಳಿಗಳು ಪ್ರವಾಹದಿಂದ ಮುಳುಗಡೆಯಾಗಿದೆ.
ಸಾಂದರ್ಭಿಕ ಚಿತ್ರ
ಪ್ರವಾಹದಿಂದಾಗಿ 171ಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿದ್ದು, 1.50 ಲಕ್ಷಕ್ಕೂ ಅಧಿಕ ಜನರು ನಿರಾಶ್ರಿತರಾಗಿದ್ದಾರೆ. ಜನರ ರಕ್ಷಣೆಗಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೇಸರ್ಗಂಜ್, ಮಹ್ಸಿ ಮತ್ತು ಮಹಿಪೂರ್ವ ತಾಲ್ಲೂಕುಗಳ ಹಳ್ಳಿಗಳಲ್ಲಿ 1.50 ಲಕ್ಷಕ್ಕೂ ಅಧಿಕ ಜನರು ವಾಸಿಸುತ್ತಿದ್ದಾರೆ. ಈ ಪೈಕಿ ಏಳು ಹಳ್ಳಿಗಳಲ್ಲಿ ಪರಿಸ್ಥಿತಿ ತೀವ್ರ ಗಂಭೀರವಾಗಿದ್ದು, ಜಿಲ್ಲಾಡಳಿತವು ಸಂತ್ರಸ್ತರಿಗೆ ನೆರವು ನೀಡುತ್ತಿದೆ ಎಂದು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಜೈ ಚಂದ್ರ ಪಾಂಡೆ ತಿಳಿಸಿದರು.