ಬೆಂಗಳೂರು, ಆ. 02 (DaijiworldNews/SM): ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಈ ನಡುವೆ ಗುಣಮುಖರಾಗುವವರ ಸಂಖ್ಯೆಯೂ ಉತ್ತಮವಾಗಿದೆ. ರಾಜ್ಯದಲ್ಲಿ ಮತ್ತೆ ರವಿವಾರದಂದು 4077 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಈ ನಡುವೆ ರವಿವಾರದಂದು ಮತ್ತೆ 5,532 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,34,819ಕ್ಕೆ ಏರಿಕೆಯಾಗಿದೆ. ಇನ್ನು ರವಿವಾರದಂದು 84 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ ಇದುವರೆಗೆ ಒಟ್ಟು 2,496 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಸದ್ಯ ಗುಣಮುಖರಾಗುವವರ ಸಂಖ್ಯೆ ಉತ್ತಮವಾಗಿದೆ. ರವಿವಾರದಂದು 4077 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ ಒಟ್ಟಾರೆ 57,725 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.