ನವದೆಹಲಿ, ಆ 03 (DaijiworldNews/PY): ದೇಶದಾದ್ಯಂತ ಜನರು ರಕ್ಷಾ ಬಂಧನದ ಸಂಭ್ರಮದಲ್ಲಿದ್ದಾರೆ. ಅಣ್ಣ-ತಂಗಿಯರ ಪವಿತ್ರ ಹಬ್ಬದಂದು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೇರಿದಂತೆ ಹಲವಾರು ಗಣ್ಯರು ಶುಭಹಾರೈಸಿದ್ದಾರೆ.
ಟ್ವೀಟ್ ಮೂಲಕ ಶುಭಾಶಯ ತಿಳಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಎಲ್ಲಾ ದೇಶವಾಸಿಗಳಿಗೆ ರಕ್ಷಾಬಂಧನ ಪವಿತ್ರ ಹಬ್ಬದ ಶುಭಾಶಯಗಳು ಎಂದು ತಿಳಿಸಿದ್ದಾರೆ.
ರಕ್ಷಾಬಂಧನ ಪವಿತ್ರ ಹಬ್ಬದಂದು ಎಲ್ಲಾ ದೇಶವಾಸಿಗಳಿಗೆ ಹೃತ್ಪೂರ್ವಕ ಶುಭಾಶಯಗಳು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಟ್ವೀಟ್ ಮೂಲಕ ಶುಭಾಶಯ ತಿಳಿಸಿದ್ದಾರೆ.
ರಕ್ಷಾ ಬಂಧನಕ್ಕೆ ಶುಭಾಶಯಗಳು. ರಾಖಿ ಎಂಬುದು ಪ್ರೀತಿ ಮತ್ತು ನಂಬಿಕೆಯ ಪವಿತ್ರ ದಾರವಾಗಿದ್ದು, ಇದು ಸಹೋದರಿಯರನ್ನು ಸಹೋದರರ ವಿಶೇಷ ಬಂಧದಲ್ಲಿ ಬೆಸೆಯುತ್ತದೆ. ಈ ಪವಿತ್ರ ದಿನದಂದು ಮಹಿಳೆಯರ ಗೌರವ ಮತ್ತು ಘನತೆಯನ್ನು ಭದ್ರಪಡಿಸುವ ನಮ್ಮ ಬದ್ಧತೆಯನ್ನು ಪುನರುಚ್ಚರಿಸೋಣ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಟ್ವೀಟ್ ಮಾಡಿದ್ದಾರೆ.