ಶ್ರೀನಗರ, ಆ 03 (DaijiworldNews/PY): ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭಾರತೀಯ ಸೈನಿಕನೋರ್ವ ಕಾಣೆಯಾಗಿದ್ದು, ಆತನ ವಾಹನ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಪ್ರಾದೇಶಿಕ ಸೇನೆಯ (ಟಿಎ) ಸೈನಿಕ ಕಾಣೆಯಾಗಿದ್ದು, ಆತನನ್ನು ಉಗ್ರರು ಅಪಹರಿಸಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ.
ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ರಂಭಮಾ ಪ್ರದೇಶದಲ್ಲಿ ಶೋಪಿಯಾನ್ ಜಿಲ್ಲೆಯ ಮುಜಾಫರ್ ಮನ್ಸೂರ್ ಹೆಸರಿನಲ್ಲಿ ನೋಂದಾವಣೆಯಾದ ವಾಹನವು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮನ್ಸೂರ್ ಅವರು ಪ್ರಾದೇಶಿಕ ಸೈನ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇಲ್ಲಿಯವರೆಗೂ ಅವರನ್ನು ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಸ್ಥಳೀಯರನ್ನು ವಿಚಾರಿಸಿ ಮಾಹಿತಿ ಪಡೆಯಲಾಗುತ್ತಿದ್ದೆ. ಅವರನ್ನು ಪತ್ತೆಹಚ್ಚುವ ಎಲ್ಲಾ ಪ್ರಯತ್ನಗಳು ನಡೆಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.