ದಾವಣಗೆರೆ, ಆ. 04 (DaijiworldNews/MB) : ಅಯೋಧ್ಯೆಯಲ್ಲಿ ಐತಿಹಾಸಿಕ ರಾಮ ಮಂದಿರದ ಭೂಮಿ ಪೂಜೆ ಆಗಸ್ಟ್ 5 ರಂದು ನೆರವೇರಲಿದ್ದು ಈ ನಿಟ್ಟಿನಲ್ಲಿ ಅಕ್ಟೋಬರ್ ಆರರಂದು ದಾವಣಗೆರೆ ಜಿಲ್ಲೆಯಿಂದ 15 ಕೆ.ಜಿ.ಬೆಳ್ಳಿ ಇಟ್ಟಿಗೆಯನ್ನು ಕೊಂಡೊಯ್ಯಲು ಹಿಂದೂ ಪರ ಸಂಘಟನೆಗಳು ನಿರ್ಧರಿಸಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಬಿಜೆಪಿ ಜಿಲ್ಲಾಘಟಕದ ಮಾಜಿ ಅಧ್ಯಕ್ಷ ಯಶವಂತರಾವ್, 1990ರಲ್ಲಿ ದಾವಣಗೆರೆಯಲ್ಲಿ ನಡೆದ ಗೋಲಿಬಾರ್ನಲ್ಲಿ ಮೃತಪಟ್ಟವರ ನೆನಪಿನಲ್ಲಿ 10 ಲಕ್ಷದ ಮೌಲ್ಯದ 15 ಕೆ.ಜಿ.ತೂಕದ ಬೆಳ್ಳಿಯ ಇಟ್ಟಿಗೆಯನ್ನು ಅಯೋಧ್ಯೆಗೆ ನೀಡಲು ರಾಮ ಭಕ್ತರು ಹಾಗೂ ಹಿಂದೂಪರ ಸಂಘಟನೆಗಳ ನಾಯಕರು ತೀರ್ಮಾನಿಸಿದ್ದಾರೆ. ಬೇತೂರು ರಸ್ತೆಯಲ್ಲಿರುವ ವೆಂಕಟೇಶ್ವರ ವೃತ್ತದಲ್ಲಿ 1990ರ ಅಕ್ಟೋಬರ್ 6ರಂದು ನಡೆದ ಗೋಲಿಬಾರ್ನಲ್ಲಿ 8 ಮಂದಿ ಸಾವನ್ನಪ್ಪಿದ್ದು, 72ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಅಂದು ಹುತಾತ್ಮರಾದ 8 ಮಂದಿಯ ಹೆಸರನ್ನು ಈ ಇಟ್ಟಿಗೆಗಳಲ್ಲಿ ಕೆತ್ತಿಸಲಾಗುತ್ತದೆ ಎಂದು ತಿಳಿಸಿದ್ದಾರೆ.