ಬೆಂಗಳೂರು, ಆ. 04 (DaijiworldNews/MB) : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಅವರು ಶೀಘ್ರದಲ್ಲೇ ಗುಣಮುಖರಾಗಿ, ಎಂದಿನಂತೆ ಕೆಲಸಕಾರ್ಯಗಳಲ್ಲಿ ತೊಡಗಿಕೊಳ್ಳಲಿ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರು ಹಾರೈಸಿದ್ದಾರೆ.
ಮೂತ್ರದ ಸೋಂಕು ಮತ್ತು ಜ್ವರದಿಂದ ಬಳಲುತ್ತಿದ್ದ ಅವರು ಸೋಮವಾರ ರಾತ್ರಿ 11.30ಕ್ಕೆ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದು ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈಗಾಗಲೇ ಕೊರೊನಾ ಸೋಂಕು ಪಾಸಿಟಿವ್ ಆಗಿರುವ ಮುಖ್ಯಮಂತ್ರಿ ಬಿಎಸ್ವೈ ಅವರು ಕೂಡಾ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಾಜಿ ಮುಖ್ಯಮಂತ್ರಿಗಳು ಹಾಗು ವಿರೋಧ ಪಕ್ಷದ ನಾಯಕರಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರು ಕೊರೋನಾ ಸೋಂಕಿನಿಂದ ಶೀಘ್ರದಲ್ಲಿ ಗುಣಮುಖರಾಗಲಿ, ಉತ್ತಮ ಆರೋಗ್ಯದೊಂದಿಗೆ ಮತ್ತೆ ಎಂದಿನಂತೆ ತಮ್ಮ ಕೆಲಸಕಾರ್ಯಗಳಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ಬಿಎಸ್ವೈ ಟ್ವೀಟ್ ಮೂಲಕ ಹಾರೈಸಿದ್ದಾರೆ.