ಶ್ರೀನಗರ , ಆ. 06 (DaijiworldNews/MB) : ಭಾರತೀಯ ಜನತಾ ಪಕ್ಷ (ಬಿಜೆಪಿ) ಯ ಸರ್ಪಂಚ್ ಅವರನ್ನು ಅವರ ನಿವಾಸದ ಮುಂದೆಯೇ ಭಯೋತ್ಪಾದಕರು ಗುಂಡಿಕ್ಕಿ ಹತ್ಯೆಗೈದ ಘಟನೆ ಆ. 6 ಗುರುವಾರ ದಕ್ಷಿಣ ಕಾಶ್ಮೀರದ ಕುಲ್ಗಾಂ ಜಿಲ್ಲೆಯ ವೆಸ್ಸು ಗ್ರಾಮದಲ್ಲಿ ನಡೆದಿದೆ.
ಭಯೋತ್ಪಾದಕರರು ಸರ್ಪಂಚ್ ಸಜಾದ್ ಅಹ್ಮದ್ ಖಾಂಡೆ ಅವರ ಮನೆಯ ಮುಂದೆಯೇ ಗುಂಡಿಕ್ಕಿದ್ದು ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ವೈದ್ಯರು ಸರ್ಪಂಚ್ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸರ್ಪಂಚ್ ಅವರ ಎದೆ, ಹೊಟ್ಟೆ ಮತ್ತು ಬೆನ್ನಿನ ಮೇಲೆ ಅನೇಕ ಗುಂಡಿನ ಗಾಯಗಳಿಗಳಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ.
ಇದಕ್ಕೂ ಮುನ್ನ ಆಗಸ್ಟ್ 4 ರಂದು ಭಯೋತ್ಪಾದಕರು ಬಿಜೆಪಿ ಸರ್ಪಂಚ್ ಆರಿಫ್ ಅಹ್ಮದ್ ಮೇಲೆ ಗುಂಡು ಹಾರಿಸಿದ್ದು ಕಳೆದ 48 ಗಂಟೆಗಳಲ್ಲಿ ನಡೆದ ಎರಡನೇ ಘಟನೆ ಇದಾಗಿದೆ. ಆರಿಫ್ ಅಹ್ಮದ್ ಅವರು ಗಂಭೀರವಾಗಿ ಗಾಯಗೊಂಡಿದ್ದು ಪ್ರಸ್ತುತ ಆಸ್ಪತ್ರೆಯಲ್ಲಿದ್ದಾರೆ. ಅವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.