ಬೆಂಗಳೂರು, ಆ. 06 (DaijiworldNews/MB) : ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು ಜ್ವರ, ನೆಗಡಿಯಂತಹ ರೋಗ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣವೇ ಆರೋಗ್ಯ ಇಲಾಖೆಯ ಸಹಾಯವಾಣಿ 104 ಕರೆ ಮಾಡಿ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಗುರುವಾರ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ದೇವರ ಕೃಪೆಯಿಂದ ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಉತ್ತರ ಕರ್ನಾಟಕ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದೆ. ಕೊರೊನಾ ಸೋಂಕಿನ ಮಧ್ಯೆ ಮಳೆಯಾಗುತ್ತಿದ್ದು, ಜನರು ಅತ್ಯಂತ ಜಾಗೃತೆವಹಿಸಿ. ಜ್ವರ, ಕೆಮ್ಮು, ನೆಗಡಿ, ಶೀತ ಮತ್ತಿತರೇ ರೋಗ ಲಕ್ಷಣಗಳು ಕಾಣಿಸಿಕೊಂಡರೆ ತಕ್ಷಣವೇ ಆರೋಗ್ಯ ಇಲಾಖೆಯ ಸಹಾಯವಾಣಿ 104 ಕರೆ ಮಾಡಿ ಎಂದು ತಿಳಿಸಿದ್ದಾರೆ.
ರಾಜ್ಯದ ಕರಾವಳಿ ಭಾಗಗಳಲ್ಲಿ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿದೆ.