ಮುಂಬೈ, ಆ. 06 (DaijiworldNews/MB) : ಹಿಂದಿ ಕಿರುತೆರೆಯ ಖ್ಯಾತ ನಟ ಸಮೀರ್ ಶರ್ಮ ಮುಂಬೈನ ತಮ್ಮ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
44 ವರ್ಷದ ಅವರು ಹೇ ರಿಶ್ತೆ ಹೇ ಪ್ಯಾರ್ ಕೆ ಧಾರಾವಾಹಿಯ ಮೂಲಕ ಹೆಸರುವಾಸಿಯಾಗಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಮಲಾಡ್ ಪೊಲೀಸ್ ಠಾಣೆಯ ಹಿರಿಯ ಇನ್ಸ್ಪೆಕ್ಟರ್ ಜಾರ್ಜ್ ಫರ್ನಾಂಡೀಸ್ ಅವರು, ಪ್ರಸ್ತುತ ಪ್ರಕರಣ ದಾಖಲಿಸಲಾಗಿದ್ದು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.
ಸಮೀರ್ ಅವರ ಮನೆಯಲ್ಲಿ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದ ಮನೆಯ ವಾಚ್ಮ್ಯಾನ್ ಮೊದಲು ಸಮೀರ್ ಅವರು ನೇಣು ಬಿಗಿದ ಸ್ಥಿತಿಯಲ್ಲಿರುವುದನ್ನು ನೋಡಿದ್ದು ಹತ್ತಿರ ಮನೆಯವರಿಗೆ ತಿಳಿಸಿದ್ದಾರೆ. ಸಮೀರ್ 2 ದಿನಗಳ ಹಿಂದೆಯೇ ಸಾವನ್ನಪ್ಪಿರುವ ಸಂಶಯವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.
2020 ರಲ್ಲಿ ಸಿನಿಮಾ ಹಾಗೂ ಧಾರಾವಾಹಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮನ್ಮೀತ್ ಗ್ರೆವಾಲ್, ಪ್ರೇಕ್ಷಾ ಶರ್ಮ, ಸುಶಾಂತ್ ಸಿಂಗ್ ರಜಪೂತ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.