ನವದೆಹಲಿ, ಆ. 06 (DaijiworldNews/MB) : ಕೇಂದ್ರ ಸರ್ಕಾರವು ಕರ್ನಾಟಕ ಸೇರಿದಂತೆ 22 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ 890. 32 ಕೋಟಿ ರೂ. ಮೊತ್ತದ ಎರಡನೇ ಹಂತದ ಕೊರೊನಾ ಪರಿಹಾರ ಪ್ಯಾಕೇಜ್ ಬಿಡುಗಡೆ ಮಾಡಿದೆ.
ಕೊರೊನಾ ಪ್ರಕರಣಗಳ ಆಧಾರದ ಮೇಲೆ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಪರಿಹಾರ ಬಿಡುಗಡೆ ಮಾಡಲಾಗಿದ್ದು ಕರ್ನಾಟಕ, ಕೇರಳ, ಪಂಜಾಬ್, ಛತ್ತೀಸ್ ಗಢ, ಜಾರ್ಖಂಡ್, ಮಧ್ಯಪ್ರದೇಶ, ಒಡಿಶಾ, ಮೇಘಾಲಯ, ಮಣಿಪುರ, ಮೀಜೋರಾಂ, ಸಿಕ್ಕಿಂ, ರಾಜಸ್ಥಾನ, ತೆಲಂಗಾಣ, ಪಶ್ಚಿಮ ಬಂಗಾಳ, ಅರುಣಾಚಲ ಪ್ರದೇಶ, ಅಸ್ಸಾಂ, ಆಂಧ್ರ ಪ್ರದೇಶ, ಗೋವಾ, ಗುಜರಾತ್ ಮತ್ತು ತಮಿಳುನಾಡಿಗೆ ಪರಿಹಾರ ಬಿಡುಗಡೆ ಮಾಡಲಾಗಿದೆ.
ಎರಡನೇ ಹಂತದ ಆರ್ಥಿಕ ನೆರವನ್ನು ಕೊರೊನಾ ನಿಯಂತ್ರಣಕ್ಕೆ ಬೇಕಾದ ಪರಿಕರಗಳ ಖರೀದಿಗೆ ಮಾತ್ರವಲ್ಲದೇ ಅಗತ್ಯವಿರುವ ಮಾನವ ಸಂಪನ್ಮೂಲ ನಿರ್ವಹಣೆ, ತರಬೇತಿ, ಆಶಾ ಕಾರ್ಯಕರ್ತೆಯರು, ಸ್ವಯಂ ಸೇವಕರು ಆರೋಗ್ಯ ಸಿಬ್ಬಂದಿಯ ಗೌರವಧನಕ್ಕೂ ವಿನಿಯೋಗಿಸುವಂತೆ ಕೇಂದ್ರ ಆರೋಗ್ಯ ಸಚಿವಾಲಯವು ರಾಜ್ಯಗಳಿಗೆ ಸೂಚನೆ ನೀಡಿದೆ.
ಏಪ್ರಿಲ್ನಲ್ಲಿ ಮೊದಲ ಹಂತದ ಪ್ಯಾಕೇಜ್ 3 ಸಾವಿರ ಕೋಟಿ ರೂಪಾಯಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿತ್ತು.