ನವದೆಹಲಿ, ಆ. 07 (DaijiworldNews/HR) : ಪಶ್ಚಿಮ ದೆಹಲಿಯ ಪಾಸ್ಚಿಮ್ ವಿಹಾರ ಪ್ರದೇಶದಲ್ಲಿ 12 ವರ್ಷದ ಬಾಲಕಿ ಮೇಲೆ ಪೈಶಾಚಿಕ ಕೃತ್ಯ ನಡೆಸಿದ ಆರೋಪಿಯ ಬಂಧನವಾಗಿದ್ದು, ಆರೋಪಿ ಕಳವು ಮಾಡುವುದನ್ನು ಬಾಲಕಿ ನೋಡಿದ್ದಾಗಿ ಕೃತ್ಯ ಎಸಗಿರುವುದಾಗಿ ಪೊಲೀಸರ ಮುಂದೆ ಬಾಯಿಬಿಟ್ಟಿದ್ದಾನೆ.
ಬಾಲಕಿಯ ಪೋಷಕರು ಸಮೀಪದ ಗಾರ್ಮೆಂಟ್ ಕಾರ್ಖಾನೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು ಅವರು ಕೆಲಸಕ್ಕೆ ಹೋದ ಸಂದರ್ಭದಲ್ಲಿ ಮನೆಯಲ್ಲಿ ಬಾಲಕಿ ಒಬ್ಬಂಟಿಯಾಗಿದ್ದು ಈ ಸಂದರ್ಭದಲ್ಲಿ ಕಾಮುಕ ಈ ಪೈಶಾಚಿಕ ಕೃತ್ಯ ಎಸಗಿದ್ದು ಬಾಲಕಿಯನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಸಂತ್ರಸ್ಥೆಯ ಕುಟುಂಬವನ್ನು ಭೇಟಿ ಮಾಡಿರುವ ದೆಹಲಿ ಮಹಿಳಾ ಆಯೋಗದ ಸ್ವಾತಿ ಮಾಲಿವಾಲ್, ಬಾಲಕಿಯ ಸ್ಥಿತಿ ಗಂಭೀರವಾಗಿದೆ. ಆಕೆಯ ದೇಹವಿಡೀ ಕಚ್ಚಿರುವ ಗುರುತುಗಳಿವೆ. ಅಷ್ಟೇ ಅಲ್ಲದೇ ಹೊಟ್ಟೆಯ ಮೇಲೆ ಗಂಭೀರವಾದ ಗಾಯಗಳಾಗಿವೆ ಮತ್ತು ಮೂಳೆಗಳು ಮುರಿದಿದೆ ಎಂದು ತಿಳಿಸಿದ್ದಾರೆ.