ತಿರುವನಂತಪುರ, ಆ. 07 (DaijiworldNews/HR): ದೇಶದ ಹಲವು ರಾಜ್ಯಗಳಲ್ಲಿ ಭೀಕರ ರೀತಿಯ ಮಳೆಯಾಗುತ್ತಿದ್ದು, ಅನೇಕ ಪ್ರಾಕೃತಿಕ ದುರಂತಗಳು ಸಂಭವಿಸುತ್ತಿದೆ. ಇದೀಗ ಕಳೆದ ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಕೇರಳದ ಮುನ್ನಾರ್ ಪ್ರದೇಶದಲ್ಲಿ ಭೂ ಕುಸಿತ ಉಂಟಾಗಿದೆ.
ಕೇರಳ ರಾಜ್ಯದ ಮುನ್ನಾರ್ ನ ರಾಜನಲಾ ಪ್ರದೇಶದಲ್ಲಿ ಭೂ ಕುಸಿತ ಉಂಟಾಗಿ ಐವರು ಮೃತಪಟ್ಟು ಅವಶೇಷಗಳಡಿಯಲ್ಲಿ ನೂರಕ್ಕೂ ಅಧಿಕ ಮಂದಿ ಸಿಲುಕಿದ್ದಾರೆ.
ಇನ್ನು ಭೂಕುಸಿತಕ್ಕೆ ಕ್ವಾರ್ಟರ್ಸ್ ಮತ್ತು ಚರ್ಚ್ ಕಟ್ಟಡ ಧರೆಗುರುಳಿಲಿದ್ದು ಸುಮಾರು ನೂರಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ ಎಂದು ಶಂಕಿಸಲಾಗಿದೆ.
ಇದುವರೆಗೆ 5 ಶವಗಳನ್ನು ಮಣ್ಣಿನಡಿಯಿಂದ ಹೊರತೆಗೆಯಲಾಗಿದ್ದು, ಅವಶೇಷಗಳಡಿಯಲ್ಲಿ ಸಿಲುಕಿಕೊಂಡವರನ್ನ್ನು ರಕ್ಷಿಸುವ ಕಾರ್ಯ ನಡೆಯುತ್ತಿದೆ.
ಭೂಕುಸಿತ ಉಂಟಾದ ಪ್ರದೇಶ ಸಂಪೂರ್ಣ ಸಂಪರ್ಕವನ್ನು ಕಳೆದುಕೊಂಡಿದ್ದು, ಕೆಲವು ರಸ್ತೆ ಕೊಚ್ಚಿ ಹೋಗಿ ಪರಿಸ್ಥಿತಿ ಗಂಭೀರವಾಗಿದೆ ಎಂದು ಕಂದಾಯ ಸಚಿವ ಚಂದ್ರಶೇಖರನ್ ತಿಳಿಸಿದ್ದಾರೆ.