ಬೆಂಗಳೂರು, ಆ. 07 (DaijiworldNews/HR): 2007ರಲ್ಲಿ ಶಬನಂ ಡೆವಲಪರ್ಸ್ ಸಂಸ್ಥೆ ಮೇಲೆ ಭೂಗತ ಪಾತಕಿ ರವಿ ಪೂಜಾರಿ ಗ್ಯಾಂಗ್ ದಾಳಿ ನಡೆಸಿ ಇಬ್ಬರನ್ನು ಶೂಟೌಟ್ ಮಾಡಿ ಕೊಂದಿತ್ತು. ಈ ಪ್ರಕರಣದ ಪ್ರಮುಖ ಆರೋಪಿ ಇಕ್ಲಾಕ್ ಖುರೇಷಿ(45) ಇದೀಗ ಸಿಸಿಬಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಭೂಗತ ಪಾತಕಿ ರವಿ ಪೂಜಾರಿಯ ಮತ್ತೊಬ್ಬ ಸಹಚರ ಇಕ್ಲಾಕ್ ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಶಬನಂ ಡೆವಲಪರ್ಸ್ ಶೂಟೌಟ್ ಪ್ರಕರಣದಲ್ಲಿ ಈ ಹಿಂದೆಯೇ ಉತ್ತರ ಪ್ರದೇಶದ ಮುಜಾಫರ್ ನಗರ ಮೂಲದ ಇಕ್ಲಾಕ್ ಖುರೇಷಿಯನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು. ಬಳಿಕ ಜಾಮೀನು ಪಡೆದು ಹೊರ ಬಂದಿದ್ದ ಆರೋಪಿ, ವಿಚಾರಣೆಗೆ ಹಾಜರಾಗದೇ ತಲೆ ಮರೆಸಿಕೊಂಡಿದ್ದಾತ ಈಗ ಬಂಧಿತನಾಗಿದ್ದಾನೆ.