ಬೆಂಗಳೂರು, ಆ. 07 (DaijiworldNews/HR): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಳೆದ ಕೆಲವು ದಿನಗಳ ಹಿಂದೆ ಕೋವಿಡ್ ಸೋಂಕು ದೃಢಪಟ್ಟಿದ್ದು ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಅವರ ಪುತ್ರ, ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಕೂಡ ಕೋವಿಡ್-19 ಸೋಂಕು ದೃಢಪಟ್ಟಿದೆ.
ಇನ್ನು ತನಗೆ ಸೋಂಕು ತಗಲಿರುವುದನ್ನು ಯತೀಂದ್ರ ಅವರೇ ತನ್ನ ಟ್ವಿಟ್ಟರ್ ನಲ್ಲಿ ಸ್ಪಷ್ಟಪಡಿಸಿದ್ದಾರೆ.
ಕೋವಿಡ್-19 ಪರೀಕ್ಷೆಯಲ್ಲಿ ನನಗೂ ಸೋಂಕು ತಾಗಿರುವುದು ದೃಢವಾಗಿದೆ. ಕಳೆದ ಕೆಲ ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕ್ವಾರಂಟೈನ್ ನಲ್ಲಿದ್ದು, ಮುಂಜಾಗ್ರತೆ ವಹಿಸಬೇಕು ಎಂದು ಯತೀಂದ್ರ ಅವರು ತನ್ನ ಟ್ವಿಟ್ಟರ್ ನಲ್ಲಿಮನವಿ ಮಾಡಿದ್ದಾರೆ.