ಕೋಯಿಕ್ಕೋಡು, ಆ 08(DaijiworldNews/HR): ಶುಕ್ರವಾರ 184 ಮಂದಿ ಪ್ರಯಾಣಿಕರನ್ನು ಹೊತ್ತು ದುಬೈಯಿಂದ ಆಗಮಿಸಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವು ಕೋಝಿಕೋಡ್ನಲ್ಲಿ ರನ್ವೇಯಿಂದ ಜಾರಿ ಕಮರಿಗೆ ಉರುಳಿರುವ ಘಟನೆ ನಡೆದಿದ್ದು, ಘಟನೆಯಲ್ಲಿ ಪೈಲಟ್, 3 ವರ್ಷದ ಮಗು ಸೇರಿ 17 ಮಂದಿ ಸಾವನ್ನಪ್ಪಿದ್ದರು. ಇದೀಗ ಅವರ ಪೈಕಿ ಮೃತಪಟ್ಟ ಒಬ್ಬರಿಗೆ ಕೋವಿಡ್ 19 ಸೋಂಕು ದೃಢಪಟ್ಟಿದೆ.
ಇನ್ನು ಅಪಘಾತದಲ್ಲಿ ಮೃತಪಟ್ಟವರ ಹಾಗೂ ಗಾಯಗೊಂಡಿರುವ ಎಲ್ಲ ಸಂತ್ರಸ್ತರಿಗೆ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದೆ.
ಕೋಯಿಕ್ಕೋಡ್ ವಿಮಾನ ನಿಲ್ದಾಣದಲ್ಲಿ ನಡೆದ ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾದವರನ್ನು ಕ್ವಾರಂಟೈನ್ಗೆ ಒಳಪಡಿಸಿ, ಎಲ್ಲರ ಕೋವಿಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಕೇರಳ ಆರೋಗ್ಯ ಸಚಿವೆ ಕೆ.ಕೆ.ಶೈಲಜಾ ತಿಳಿಸಿದ್ದಾರೆ.