ಬೆಂಗಳೂರು, ಆ 08(DaijiworldNews/HR): ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕೊರೊನಾ ವೈರಸ್ ಅನ್ನು ಹತ್ತಿಕ್ಕಲು ಶ್ರಮ ಪಡುತ್ತಿರುವ ವೈದ್ಯಕೀಯ ಸಿಬ್ಬಂದಿಗಳ ಪಾತ್ರ ದೊಡ್ಡದು. ಹೀಗಾಗಿ ಕರ್ತವ್ಯಕ್ಕೆ ಗೈರು ಹಾಜರಾಗಿರುವವರು ಕೂಡಲೇ ಹಾಜರಾಗಬೇಕು ಇಲ್ಲವಾದಲ್ಲಿ ಕಾನೂನು ಕ್ರಮ ಜರಗಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಇಡೀ ರಾಜ್ಯವೇ ಸಂಕಷದಲ್ಲಿದೆ ಹಾಗಾಗಿ ಈ ಹೊತ್ತಿನಲ್ಲಿ ಕರ್ತವ್ಯಕ್ಕೆ ಗೈರು ಹಾಜರಾಗುವುದು ಸರಿಯಲ್ಲ. ವೈದ್ಯರು, ಅರೆ ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಕೊರೋನ ವಾರಿಯರ್ಸ್ ಆಗಿ ದುಡಿಯುತ್ತಿರುವ ಪ್ರತಿಯೊಬ್ಬರೂ ತಮಗೆ ವಹಿಸಿರುವ ಕೆಲಸವನ್ನು ಮಾಡಲೇಬೇಕು ಇಲ್ಲವಾದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.