ಮುಂಬೈ, ಆ. 09 (DaijiworldNews/MB) : ಬಾಲಿವುಡ್ ನಟ ಸಂಜಯ್ ದತ್ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು ಶನಿವಾರ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಸಂಜಯ್ ದತ್ ಅವರಿಗೆ ಚಿಕಿತ್ಸೆ ನೀಡಿದ ವೈದ್ಯರು, ಕೊರೊನಾ ನಿಯಾಮಾವಳಿ ಪ್ರಕಾರವಾಗಿ ಸಂಜಯ್ ದತ್ ಅವರ ಕೊರೊನಾ ಪರೀಕ್ಷೆ ನಡೆಸಲಾಗಿದ್ದು ವರದಿ ನೆಗೆಟಿವ್ ಬಂದಿದೆ. ಆದರೆ ವೈದ್ಯಕೀಯ ಕಾರಣದಿಂದಾಗಿ ಸ್ವಲ್ಪ ಸಮಯಗಳ ಕಾಲ ಆಸ್ಪತ್ರೆಯಲ್ಲಿ ಇರುತ್ತಾರೆ. ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.
ಬಾಲಿವುಡ್ನ ಖ್ಯಾತ ನಟ ಸಂಜಯ್ ದತ್ ಕನ್ನಡದ "ಕೆಜಿಎಫ್-2" ಸಿನಿಮಾದಲ್ಲಿ ಅಧೀರನ ಪಾತ್ರದಲ್ಲಿ ಅಭಿನಯಿಸಿದ್ದಾರೆ.