ವಿಜಯವಾಡ, ಆ. 09 (DaijiworldNews/MB) : ಕೊರೊನಾ ಆಸ್ಪತ್ರೆಯನ್ನಾಗಿ ಪರಿವರ್ತಿಸಿದ್ದ ಹೋಟೆಲ್ವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ 7 ಮಂದಿ ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ ವಿಜಯವಾಡದಲ್ಲಿ ಭಾನುವಾರ ಮುಂಜಾನೆ ನಡೆದಿದೆ.
ಮುಂಜಾನೆ 5 ಗಂಟೆಗೆ ಈ ದುರಂತ ಸಂಭವಿಸಿದ್ದು ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಭಂದಿಗಳು ದಾವಿಸಿದ್ದಾರೆ. ಅಗ್ನಿ ಅವಘಡದಿಂದಾಗಿ 30ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಈ ಆಸ್ಪತ್ರೆಯಲ್ಲಿ 22ಕ್ಕೂ ಅಧಿಕ ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದರು. ಕಟ್ಟಡದಲ್ಲಿದ್ದ ಎಲ್ಲರನ್ನೂ ಸ್ಥಳಾಂತರ ಮಾಡಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ಮೊಹಮದ್ ಇಮ್ತಿಯಾಜ್ ಅವರು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಈ ಅವಘಡ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದು ಬಂದಿದ್ದು ಇನ್ನಷ್ಟೇ ಈ ಬಗ್ಗೆ ಹೆಚ್ಚಿನ ಮಾಹಿತಿ ಲಭಿಸಬೇಕಿದೆ ಎಂದು ಹೇಳಿದ್ದಾರೆ.