ನವದೆಹಲಿ, ಆ 09(DaijiworldNews/HR): ದೇಶದ ಕೃಷಿಕರಿಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ 1 ಲಕ್ಷ ಕೋಟಿ ರೂ. ನಿಧಿ ಬಿಡುಗಡೆ ಮಾಡಲಿದ್ದಾರೆ.
ಈ 1 ಲಕ್ಷ ಕೋಟಿ ರೂ ನಿಧಿಯ ಮೂಲಕ ಕೃಷಿ ಉತ್ಪನ್ನಗಳಿಗೆ ಅಗತ್ಯವಾದ ಮೂಲಸೌಕರ್ಯ ಒದಗಿಸಲು ಬಳಸಲಾಗುವುದು ಮತ್ತು ರೈತರು ಬೆಳೆದ ಬೆಳೆಗಳನ್ನು ಸಂರಕ್ಷಿಸಲು ಸಂಸ್ಕರಣಾ ಘಟಕ, ಕೋಲ್ಡ್ ಸ್ಟೋರೇಜ್ ಸ್ಥಾಪನೆ ಹಾಗೂ ಇನ್ನಿತರ ಸೌಲಭ್ಯಗಳನ್ನು ಸ್ಥಾಪಿಸಲಾಗುವುದು.
ಇನ್ನು ರೈತರು ಬೆಳೆದ ಉತ್ಪನಗಳನ್ನು ಕಡಿಮೆ ಬೆಲೆಗೆ ಮಾರಾಟಮಾಡದೆ ಅವುಗಳನ್ನು ಹೆಚ್ಚಿನ ಕಾಲ ಭದ್ರವಾಗಿ ಸಂಗ್ರಹಿಸಿ ಸೂಕ್ತ ಬೆಲೆ ಬಂದಾಗ ಮಾರಟ ಮಾಡಬಹುದಾಗಿದೆ. ಈ ಎಲ್ಲಾ ಮೂಲ ಸೌಕರ್ಯಗಳಿಗಾಗಿ ಸಾಲ ನೀಡಲು 1 ಲಕ್ಷ ಕೋಟಿ ರೂ. ನಿಧಿ ಬಳಸಬಹುದಾಗಿದೆ.
ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿ ದೇಶದ 8.5 ಕೋಟಿ ರೈತರಿಗೆ 6 ನೇ ಕಂತಾಗಿ 17,000 ಕೋಟಿ ರೂ. ಬಿಡುಗಡೆ ಮಾಡಲಿದ್ದು, ಈ ಕಾರ್ಯಕ್ರಮದಲ್ಲಿ ದೇಶದ ವಿವಿಧ ಪ್ರದೇಶಗಳ ರೈತರು ಮತ್ತು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಪಾಲ್ಗೊಳ್ಳಲಿದ್ದಾರೆ.