ಬೆಂಗಳೂರು, ಆ 09 (DaijiworldNews/PY): ಪಿ.ಎಂ.ಕಿಸಾನ್ ಯೋಜನೆಯಡಿ ರಾಜ್ಯದ 52.50 ಲಕ್ಷ ರೈತರ ಖಾತೆಗಳಿಗೆ 1049 ಕೋಟಿ ರೂ.ಗಳನ್ನು ಮೊದಲ ಕಂತಿನಲ್ಲಿ ಇಂದು ಜಮಾ ಮಾಡಲಾಗುತ್ತಿದೆ ಎಂದು ಸಿಎಂ ಬಿಎಸ್.ಯಡಿಯೂರಪ್ಪ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ರಾಜ್ಯದ ರೈತರ ಪರವಾಗಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಗೆ ಪಿ.ಎಂ.ಕಿಸಾನ್ ಯೋಜನೆಗಾಗಿ ನನ್ನ ಧನ್ಯವಾದ ಸಲ್ಲಿಸುತ್ತೇನೆ. ರಾಜ್ಯದ 52.50 ಲಕ್ಷ ರೈತರ ಖಾತೆಗಳಿಗೆ 1049 ಕೋಟಿ ರೂ.ಗಳನ್ನು ಮೊದಲ ಕಂತಿನಲ್ಲಿ ಇಂದು ಜಮಾ ಮಾಡಲಾಗುತ್ತಿದೆ. ರೈತರಿಗೆ ಆರ್ಥಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಯೋಜನೆ ಪರಿಣಾಮಕಾರಿಯಾಗಿದೆ ಎಂದು ತಿಳಿಸಿದ್ದಾರೆ.
ಆಗಸ್ಟ್ 9ರಂದು ಕೃಷಿ ಮೂಲಸೌಕರ್ಯ ನಿಧಿಯಿಂದ ಪಿಎಂ-ಕಿಸಾನ್ ಯೋಜನೆಯಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಆನ್ಲೈನ್ ಮೂಲಕ ರೈತರಿಗೆ ನೆರವು ಬಿಡುಗಡೆ ಮಾಡುತ್ತಿರುವುದಾಗಿ ಹೇಳಿದ್ದಾರೆ.
ಪಿಎಂ-ಕಿಸಾನ್ ಯೋಜನೆಯಡಿ ದೇಶದ 8.5 ಕೋಟಿ ರೈತರಿಗೆ 6ನೇ ಕಂತಿನ 17,000 ಕೋಟಿ.ರೂ ಪ್ರಧಾನಿಗಳಿಂದ ಬಿಡುಗಡೆಯಾಗಲಿದೆ ಎಂದಿದ್ದಾರೆ.
ರಾಜ್ಯದ ಸುಮಾರು 52.50 ಲಕ್ಷ ಕೃಷಿ ಕುಟುಂಬಗಳಿಗೆ ಲಾಭದಾಯಕವಾಗಿರುವ ಈ ಯೋಜನೆಯಡಿ ಈ ವರ್ಷದ ಮೂರು ಕಂತುಗಳ ಮೊದಲ ಕಂತಿನಲ್ಲಿ 1049 ಕೋಟಿ.ರೂಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಬಿಡುಗಡೆ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.