ನವದೆಹಲಿ, ಆ 09(DaijiworldNews/HR) : ರಕ್ಷಣಾ ಕ್ಷೇತ್ರದಲ್ಲಿ ಭಾರತ ಆತ್ಮ ನಿರ್ಭರ ಆಗಲಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.
ರಕ್ಷಣಾ ಕ್ಷೇತ್ರದ 101 ಉಪಕರಣಗಳ ಆಮದಿಗೆ ನಿರ್ಬಂಧ ಹೇರಲಾಗುವುದು, ರಕ್ಷಣಾ ಸಾಮಾಗ್ರಿಯ ಉತ್ಪಾದನೆಗೆ ನಿರ್ಧಾರ ಮಾಡಲಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವೀಟ್ ಮೂಲಕ ಘೋಷಿಸಿದರು.
ಟ್ರಾನ್ಸ್ ಪೋರ್ಟ್ ಏರ್ ಕ್ರಾಫ್ಟ್ , ರೈಫಲ್ಸ್, ಫಿರಂಗಿ ಸೇರಿದಂತೆ 101 ವಿವಿಧ ಉಪಕರಣಗಳನ್ನು ದೇಶದಲ್ಲೇ ತಯಾರಿಸಲು ನಿರ್ಧಾರ ಮಾಡಲಾಗಿದೆ. ಇದರಿಂದ ಆತ್ಮನಿರ್ಭರ ಭಾರತಕ್ಕೆ ಉತ್ತೇಜನ ಸಿಗಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ.
ರಕ್ಷಣಾ ಕ್ಷೇತ್ರದಲ್ಲಿ ದೇಶಿಯ ಉತ್ಪಾದನೆಗೆ ಒತ್ತು ನೀಡಲಾಗಿದೆ. 1.30 ಲಕ್ಷ ಕೋಟಿ ರೂಪಾಯಿಯನ್ನು ವಾಯುಸೇನಾಪಡೆಗೆ ಶಸ್ತ್ರಾಸ್ತ್ರ ನಿರ್ಮಾಣಕ್ಕಾಗಿ ಮೀಸಲಿಡಲಾಗಿದೆ. 1.40 ಲಕ್ಷ ಕೋಟಿ ರೂಪಾಯಿಗಳನ್ನು ನೌಕಾಸೇನೆಯ ಶಸ್ತ್ರಾಸ್ತ್ರ ನಿರ್ಮಾಣಕ್ಕೆ ಮೀಸಲಿಡಲಾಗಿದೆ ಎಂದು ತಿಳಿಸಿದರು.