ವಿಜಯವಾಡ, ಆ 09(DaijiworldNews/HR): ಕೊರೊನಾ ಆಸ್ಪತ್ರೆಯನ್ನಾಗಿ ಪರಿವರ್ತಿಸಿದ್ದ ಹೋಟೆಲ್ವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ 7 ಮಂದಿ ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ ವಿಜಯವಾಡದಲ್ಲಿ ಭಾನುವಾರ ಮುಂಜಾನೆ ನಡೆದಿದ್ದು, ಘಟನೆಯಲ್ಲಿ ಮೃತಪಟ್ಟವರ ಕುಟಂಬಕ್ಕೆ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ₹50 ಲಕ್ಷ ಪರಿಹಾರಧನ ಘೋಷಿಸಿದ್ದಾರೆ.
ಇನ್ನು ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುವಂತೆ ಆದೇಶಿಸಿದ ಜಗನ್ ಗಾಯಗೊಂಡಿವರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಮುಂಜಾನೆ 5 ಗಂಟೆಗೆ ಈ ದುರಂತ ಸಂಭವಿಸಿದ್ದು ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಭಂದಿಗಳು ದಾವಿಸಿದ್ದಾರೆ. ಅಗ್ನಿ ಅವಘಡದಿಂದಾಗಿ 30ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಈ ಘಟನೆಗೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿರುವ ಆಂಧ್ರಪ್ರದೇಶದ ಗೃಹ ಸಚಿವೆ ಸುಚರಿತಾ ಅವರು, ಕೊರೊನಾ ಸಂಖ್ಯೆ ಹೆಚ್ಚಳದ ಕಾರಣದಿಂದ ಹೋಟೆಲ್ನ್ನು ಖಾಸಗಿ ಆಸ್ಪತ್ರೆಯಾಗಿ ಮಾರ್ಪಡಿಸಲಾಗಿದ್ದು, ರಮೇಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳಿಗೆ ಅಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಅಗ್ನಿ ಅವಘಡ ಸಂಭವಿಸಿದ ಸಂದರ್ಭದಲ್ಲಿ ಆಸ್ರತ್ರೆಯಲ್ಲಿ 40 ರೋಗಿಗಳು ಮತ್ತು 10 ವೈದ್ಯಕೀಯ ಸಿಬ್ಬಂದಿಗಳು ಇದ್ದು ಕೂಡಲೇ ಅವರನ್ನು ರಕ್ಷಿಸುವ ಕಾರ್ಯ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.