ಬೆಂಗಳೂರು, ಆ. 09 (DaijiworldNews/MB) : ಕೊರೊನಾ ಸೋಂಕಿಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಣಿಪಾಲ್ ಆಸ್ಪತ್ರೆ ಮಾಹಿತಿ ನೀಡಿದೆ.
ಮಣಿಪಾಲ್ ಆಸ್ಪತ್ರೆ ವೈದ್ಯರ ತಂಡ ಸಿಎಂ ಬಿಎಸ್ ಯಡಿಯೂರಪ್ಪ ಅವರ ಆರೋಗ್ಯದ ಕುರಿತು ಪ್ರಕಟಣೆ ಹೊರಡಿಸಿದ್ದು, ಸಿಎಂ ಬಿಎಸ್ವೈ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಚಿಕಿತ್ಸೆಗೆ ಯಡಿಯೂರಪ್ಪನವರು ಉತ್ತಮವಾಗಿ ಸ್ಪಂಧನೆ ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಇತ್ತ ಬಿಎಸ್ವೈ ಅವರು ಆಸ್ಪತ್ರೆಯಲ್ಲಿಯೇ ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಿದ್ದು ಪ್ರವಾಹದ ಬಗ್ಗೆ ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ.
ಬಿಎಸ್ವೈ ಅವರು ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಆಗಸ್ಟ್ 2ರಂದು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು.