ಬೆಂಗಳೂರು, ಆ 10 (DaijiworldNews/PY): ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಪುನಃ ಕೊರೊನಾ ಪರೀಕ್ಷೆ ಮಾಡಲಾಗಿದೆ. ಕೊರೊನಾ ಪರೀಕ್ಷಾ ವರದಿಯಲ್ಲಿ ನೆಗೆಟಿವ್ ಬಂದಿದ್ದು, ಆಸ್ಪತ್ರೆಯಿಂದ ನಾಳೆ ಬಿಡುಗಡೆಯಾಗಲಿದ್ದಾರೆ.
ಸಿಎಂ ಬಿಎಸ್ವೈ ಅವರಿಗೆ ಕಳೆದ ವಾರದಂದು ಕೊರೊನಾ ಸೋಂಕು ತಗುಲಿದ್ದ ಕಾರಣ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಚೇತರಿಸಿಕೊಂಡಿದ್ದಾರೆ. ಇದೀಗ ಅವರಿಗೆ ಪುನಃ ಕೊರೊನಾ ಪರೀಕ್ಷೆ ಮಾಡಿದ್ದು, ವೈದ್ಯಕೀಯ ಪರೀಕ್ಷೆಯಲ್ಲಿ ನೆಗೆಟಿವ್ ಬಂದರೆ ಅವರು ಶೀಘ್ರವೇ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸಿಎಂ ಬಿಎಸ್ವೈ ಅವರ ಆರೋಗ್ಯದಲ್ಲಿ ಬಹುತೇಕ ಚೇತರಿಕೆ ಕಂಡುಬಂದಿದೆ. ಭಾನುವಾರ ಕೊರೊನಾ ಪರೀಕ್ಷೆ ನಡೆಸಿದ್ದು, ಇಂದು ವರದಿಯಲ್ಲಿ ನೆಗೆಟಿವ್ ಬಂದಿರುವುದರಿಂದ ಅವರು ನಾಳೆ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಇಂದು ಬಂದ ವರದಿಯಲ್ಲಿ ಅವರಿಗೆ ಕೊರೊನಾ ನೆಗೆಟಿವ್ ಬಂದಿದೆ. ಅವರಿಗೆ ಸೋಂಕಿನ ಯಾವುದೇ ಲಕ್ಷಣಗಳಿಲ್ಲ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಸದ್ಯ ಬಿಎಸ್ವೈ ಅವರು ಲಕ್ಷಣ ರಹಿತ ಸೋಂಕು ಪೀಡಿತರಾಗಿದ್ದು, ಕರ್ನಾಟಕದಲ್ಲಿ ಪ್ರಸ್ತುತ ಚಾಲನೆಯಲ್ಲಿರುವ ಮಾರ್ಗಸೂಚಿಗಳ ಪ್ರಕಾರ, ಆಮ್ಲಜನಕ ಶುದ್ಧತ್ವದ ಪ್ರಮಾಣ ಶೇ.95ಕ್ಕಿಂತಲೂ ಹೆಚ್ಚಿದ್ದರೆ, ಉಸಿರಾಟದ ಪ್ರಮಾಣ ನಿಮಿಷಕ್ಕೆ ಶೇ.24ರಷ್ಟು ಇದ್ದರೆ, ಪರೀಕ್ಷೆ ನಡೆಸದೆಯೇ ಬಿಡುಗಡೆ ಮಾಡಬಹುದು ಎಂದು ಹೇಳಿದೆ.
ಪ್ರಸ್ತುತ ಬಿಎಸ್ವೈ ಅವರು 8 ದಿನಗಳವರೆಗೆ ಆಸ್ಪತ್ರೆಯಲ್ಲಿ ಕಾಲ ಕಳೆದಿದ್ದಾರೆ. ಆದರೆ, ಅವರ ವಯಸ್ಸನ್ನು ಗಮನದಲ್ಲಿಟ್ಟುಕೊಂಡು ವೈದ್ಯಕೀಯ ಪರೀಕ್ಷೆಯ ದೃಢೀಕರಣಕ್ಕಾಗಿ ನಿರೀಕ್ಷಿಸಬೇಕಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.