ನವದೆಹಲಿ, ಆ 10(DaijiworldNews/HR): ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ತಾತ್ಕಾಲಿಕ ಅಧಿಕಾರ ಅವಧಿ ಇಂದು ಮುಕ್ತಯಾವಾಗಲಿದೆ.
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿಯಾಗಿದ್ದ ಸೋನಿಯಾ ಗಾಂಧಿ ಅವರ ಸ್ಥಾನಕ್ಕೆ ಮುಂದೆ ಯಾರು ಎಂಬುದು ಪ್ರಶ್ನೆಗೆ ಎದ್ದಿದ್ದು, ಇದಕ್ಕೆ ಪಕ್ಷದ ಮುಖಂಡ ಮತ್ತು ರಾಜ್ಯಸಭಾ ಸಂಸದ ಅಭಿಷೇಕ್ ಮನು ಸಿಂಘ್ವಿ ಉತ್ತರ ನೀಡಿದ್ದಾರೆ.
ಅಧ್ಯಕ್ಷರ ಆಯ್ಕೆ ಕುರಿತು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಧರಿಸಿ, ಮುಂದಿನ ದಿನಗಳಲ್ಲಿ ಇದೇ ನಿಯಮ ಅನುಸರಿಸಿ ಪಕ್ಷದಲ್ಲಿನ ನಾಯಕತ್ವ ಸಮಸ್ಯೆಯನ್ನು ಶೀಘ್ರ ಇತ್ಯರ್ಥ ಮಾಡಲಿದ್ದೇವೆ ಎಂದು ಸಿಂಘ್ವಿ ತಿಳಿಸಿದ್ದಾರೆ.
ಇನ್ನು ಲೋಕಸಭೆ ಚುನಾವಣೆ ಸೋಲಿನ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಈ ಅಧ್ಯಕ್ಷ ಸ್ಥಾನವನ್ನು ಅನಿವಾರ್ಯವಾಗಿ ಕಳೆದ ವರ್ಷ ಆಗಸ್ಟ್ 10ರಂದು ಸೋನಿಯಾ ಗಾಂಧಿ ಅಧಿಕಾರ ವಹಿಸಿಕೊಂಡಿದ್ದರು ಅಭಿಷೇಕ್ ಮನು ತಿಳಿಸಿದರು.
ಇನ್ನು ಆಗಸ್ಟ್ 10ರಿಂದ ಕಾಂಗ್ರೆಸ್ಗೆ ತಲೆ ಇಲ್ಲ ಎಂದು ಯಾರಾದರು ಹೇಳಿದರೆ, ಅದು ಸಾಧ್ಯವೇ ಎಂದು ನಿಮಗೆ ನೀವೇ ಕೇಳಿಕೊಳ್ಳಿ. ಇದ್ದಕ್ಕಿದ್ದಂತೆ ಸ್ಥಾನ ಖಾಲಿಯಾದರೆ ಈ ರೀತಿಯಾಗಿ ಹೇಳುವುದು ನಮ್ಮ ಸಂವಿಧಾನದ ವ್ಯಾಖ್ಯಾನದಲ್ಲಿದೆಯೇ ಎಂದು ಅಭಿಷೇಕ್ ಮನು ಸಿಂಘ್ವಿ ಪ್ರಶ್ನಿಸಿದ್ದಾರೆ.