ನವದೆಹಲಿ, ಆ. 10 (DaijiworldNews/MB) : ಭಾರತದ ಮಾಜಿ ರಾಷ್ಟ್ರಪತಿ ಹಾಗೂ ಭಾರತ ರತ್ನ ಪುರಸ್ಕೃತ ಪ್ರಣಬ್ ಮುಖರ್ಜಿ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ಈ ಬಗ್ಗೆ ಸ್ವತಃ ಪ್ರಣಬ್ ಮುಖರ್ಜಿ ಅವರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದು, ''ನಿಯಮಿತ ಆರೋಗ್ಯ ತಪಾಸಣೆಗೆ ಹೋದ ಸಂದರ್ಭದಲ್ಲಿ ಕೊರೊನಾ ಪರೀಕ್ಷೆಯಲ್ಲಿ ವರದಿ ಪಾಸಿಟಿವ್ ಆಗಿದೆ. ಕಳೆದ ವಾರದಿಂದ ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕ್ವಾರಂಟೈನ್ಗೆ ಒಳಗಾಗಿ, ಹಾಗೆಯೇ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ'' ಎಂದು ಹೇಳಿದ್ದಾರೆ.
ಆಗಸ್ಟ್ 2ರಂದು ಗೃಹ ಸಚಿವ ಅಮಿತ್ ಶಾ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.