ಬೆಂಗಳೂರು ಆ 10 (Daijiworld News/MSP): ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ನಡೆಸಿದ ಪ್ರಸಕ್ತ ಸಾಲಿನ ಎಸೆಸೆಲ್ಸಿ ಫಲಿತಾಂಶ ಪ್ರಕಟಗೊಂಡಿದೆ. 625/625 ಪಡೆದು ಈ ಬಾರಿ ಆರು ಮಂದಿ ಮೊದಲ ರ್ಯಾಂಕ್ ಪಡೆದಿದ್ದಾರೆ. 11 ಮಂದಿ 625ಕ್ಕೆ 624 ಅಂಕಗಳನ್ನು ಪಡೆದಿದ್ದಾರೆ. ಒಟ್ಟಾರೆ ಶೇ. 71.80 ಫಲಿತಾಂಶ ಈ ಬಾರಿ ಬಂದಿದೆ. ಇದು ಕಳೆದ ಬಾರಿ ಶೇ.73.70 ರಷ್ಟು ಫಲಿತಾಂಶ ಬಂದಿತ್ತು.
ಈ ವರ್ಷ ಶೇ.71.80 ಮಂದಿ ಅಂದರೆ 5, 82, 314 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕಳೆದ ವರ್ಷ 73.70 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಈ ಬಾರಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರಥಮ ಸ್ಥಾನ ಲಭಿಸಿದ್ದು, ಉಡುಪಿ ಜಿಲ್ಲೆ ೭ನೇ ಸ್ಥಾನ ಹಾಗೂ ದಕ್ಷಿಣ ಕನ್ನಡ ಜಿಲ್ಲೆ 12 ಸ್ಥಾನ ಪಡೆದುಕೊಂಡಿದೆ. ಯಾದಗಿರಿ ಕೊನೆಯ ಸ್ಥಾನ ಸ್ಥಾನದಲ್ಲಿದೆ.
ಈ ಬಾರಿ 2, 28, 734 ವಿದ್ಯಾರ್ಥಿಗಳು ಅನುತೀರ್ಣರಾಗಿದ್ದಾರೆ.ಪ್ರತೀ ಬಾರಿಯಂತೆಯೂ ಈ ಬಾರಿಯೂ ಬಾಲಕಿಯರದ್ದೇ ಮೇಲುಗೈ ಸಾಧಿಸಿದ್ದಾರೆ. ಈ ಬಾರಿ ಶೇ.66.41 ಬಾಲಕರು ಉತ್ತೀರ್ಣರಾಗಿದ್ದು, ಶೇ.77.74ರಷ್ಟು ಬಾಲಕಿಯರು ಉತ್ತೀರ್ಣರಾಗಿದ್ದಾರೆ.
ಈ ಪೈಕಿ ಸರ್ಕಾರಿ ಶಾಲೆಗಳ ಶೇ.72.79 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಅನುದಾನಿತ ಶಾಲೆಗಳ ಶೇ. 70.60 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅನುದಾನ ರಹಿತ ಶಾಲೆಗಳ ಶೇ.83.12ಮಂದಿ ವಿದ್ಯಾರ್ಥಿಗಲು ಉತ್ತೀರ್ಣರಾಗಿದ್ದಾರೆ.
ಇಲಾಖೆಯ ಅಧಿಕೃತ ಜಾಲತಾಣಗಳಾದ kseeb.kar.nic.in ಅಥವಾ karresults.nic.in ನಲ್ಲಿಯೂ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದು. ಫಲಿತಾಂಶ ತಿಳಿಯಲು ಯಾವುದೇ ಸಂಖ್ಯೆಗೆ ವಿದ್ಯಾರ್ಥಿಗಳು ಎಸ್ಎಂಎಸ್ ಕಳುಹಿಸುವ ಅಗತ್ಯವಿಲ್ಲ. ಮಂಡಳಿಯೇ ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗೆ ಉಚಿತವಾಗಿ ಕಳಿಸಲಿದೆ. ನೆಟ್ ವರ್ಕ್ ಸಮಸ್ಯೆ ಆಗದಂತೆ ಎಲ್ಲಾ ವ್ಯವಸ್ಥೆ ಮಾಡಲಾಗಿದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ. ಕೊರೋನಾ ಸೋಂಕಿನ ಭೀತಿಯ ನಡುವೆಯೂ 8,48,203 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಲಾಕ್ ಡೌನ್ ಮುಗಿದ ಬಳಿಕ ಇಂಗ್ಲೀಷ್ ಪರೀಕ್ಷೆ ನಡೆಸಲಾಗಿತ್ತು.