ತಿರುಪತಿ, ಆ. 10 (DaijiworldNews/MB) : ತಿರುಮಲ ತಿರುಪತಿ ತಿಮ್ಮಪ್ಪ ದೇವಸ್ಥಾನದಲ್ಲಿ ಲಾಕ್ಡೌನ್ ಮುಗಿದು ದೇವರ ದರ್ಶನಕ್ಕೆ ಅವಕಾಶ ನೀಡಿದ ಬಳಿಕ ತಿರುಮಲ ತಿರುಪತಿ ದೇವಸ್ಥಾನ ಮಂಡಳಿ (ಟಿಟಿಡಿ)ಯ 743 ಮಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು ಎಂದು ದೇವಸ್ಥಾನದ ಕಾರ್ಯನಿರ್ವಣಾಧಿಕಾರಿ ಅನಿಲ್ ಕುಮಾರ್ ಸಿಂಗ್ ಅವರು ಸ್ಪಷ್ಟಪಡಿಸಿದ್ದಾರೆ.
ದೇಶದಲ್ಲಿ ಕೊರೊನಾ ಸೋಂಕು ಹಿನ್ನಲೆಯಲ್ಲಿ ಲಾಕ್ಡೌನ್ ಘೋಷಣೆ ಮಾಡಿದ್ದರಿಂದ ಮುಚ್ಚಲಾಗಿದ್ದ ದೇವಾಸ್ಥಾನದಲ್ಲಿ ಬಳಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ನಂತರ ದೇವಾಲಯದ ಸಿಬ್ಬಂದಿಗಳಿಗೆ ಸೋಂಕು ದೃಢಫಟ್ಟಿದೆ. 743 ಸಿಬ್ಬಂದಿಗಳಲ್ಲಿ 402 ಮಂದಿ ಗುಣಮುಖರಾಗಿ ಕರ್ತವ್ಯಕ್ಕೆ ಹಾಜರಾಗಿದ್ದು 338 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಮೂವರು ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದಿದ್ದಾರೆ.
ಹಾಗೆಯೇ ದೇಶದೆಲ್ಲೆಡೆ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ನಮ್ಮ ಸಿಬ್ಬಂದಿಗಳಿಗೆ ಯಾವುದೇ ತೊಂದರೆ ಉಂಟಾಗದಂತೆ ಉತ್ತಮ ರೀತಿಯಲ್ಲಿ ಚಿಕಿತ್ಸೆಯನ್ನು ಕೋವಿಡ್ ಕೇಂದ್ರದಿಂದ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.