ಬೆಂಗಳೂರು, ಆ 10 (DaijiworldNews/PY): ಸಿಎಂ ಬಿಎಸ್.ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಇದೀಗ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ನನ್ನ ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗ ಲಕ್ಷಣಗಳಿಲ್ಲದಿದ್ದರೂ, ಮುನ್ನೆಚ್ಚರಿಕಾ ದೃಷಿಯಿಂದ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರು ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಟ್ವೀಟ್ನಲ್ಲಿ ಬರೆದುಕೊಂಡಿದ್ದರು.
ಸಿಎಂ ಅವರ ಕಾವೇರಿ ಮತ್ತು ಕೃಷ್ಣಾ ನಿವಾಸಗಳ ಎಲ್ಲಾ ಸಿಬ್ಬಂದಿಗಳಿಗೂ ಕೊರೊನಾ ತಪಾಸಣೆ ಮಾಡಲಾಗಿದ್ದು, ಕಾವೇರಿ ನಿವಾಸದಲ್ಲಿದ್ದ ಬಾಣಸಿಗ ಮಹಿಳೆ ಸೇರಿ ಗನ್ ಮ್ಯಾನ್, ವಿಶೇಷ ಕರ್ತವ್ಯಧಿಕಾರಿ ಹಾಗೂ ಆರು ಮಂದಿಗೆ ಸೋಂಕು ಪತ್ತೆಯಾಗಿತ್ತು.