ನವದೆಹಲಿ, ಆ. 11 (DaijiworldNews/MB) : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ 10 ರಾಜ್ಯಗಳ ಸಿಎಂಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿದ್ದಾರೆ.
ಈ ವಿಡಿಯೋ ಕಾನ್ಫೆರೆನ್ಸ್ ಇಂದು ಬೆಳಗ್ಗೆ 11.30 ಕ್ಕೆ ಸಭೆ ಆರಂಭವಾಗಿದ್ದು, ಆಂಧ್ರಪ್ರದೇಶ, ಕರ್ನಾಟಕ, ತಮಿಳುನಾಡು, ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಪಂಜಾಬ್, ಬಿಹಾರ, ಗುಜರಾತ್, ತೆಲಂಗಾಣ, ಉತ್ತರ ಪ್ರದೇಶ ರಾಜ್ಯ ಸರ್ಕಾರಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಆದರೆ ಕೊರೊನಾ ಸೋಂಕು ಪಾಸಿಟಿವ್ ಆಗಿದ್ದ ಕರ್ನಾಟಕ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಗುಣಮುಖರಾಗಿ ಕ್ವಾರಂಟೈನ್ನಲ್ಲಿದ್ದು ಈ ಸಭೆಯಲ್ಲಿ ಅವರು ಭಾಗಿಯಾದ ಬಗ್ಗೆ ಯಾವುದೇ ಮಾಹಿತಿ ದೊರೆತಿಲ್ಲ.
ಕಳೆದ ತಿಂಗಳಲ್ಲಿ ಆರಂಭವಾಗಿರುವ ಅನ್ಲಾಕ್ 3 ಕುರಿತಾಗಿ ಈ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಹಾಗೆಯೇ ಸೋಂಕು ಹರಡುವಿಕೆ ನಿಯಂತ್ರಣದ ನಿಟ್ಟಿನಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚಿಸಲಾಗುತ್ತದೆ ಎಂದು ಹೇಳಲಾಗಿದೆ.