ಬೆಂಗಳೂರು, ಆ. 12 (DaijiworldNews/MB) : ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಸಂಬಂಧಿಯೋರ್ವ ಧಾರ್ಮಿಕ ಅವಹೇಳನಕಾರಿ ಪೋಸ್ಟ್ ಹಾಕಿದ್ದರೆಂದು ಆರೋಪ ಮಾಡಿ ಮಂಗಳವಾರ ತಡರಾತ್ರಿ ಕೆ.ಕಿ ಹಳ್ಳಿ, ಡಿ.ಜೆ ಹಳ್ಳಿ, ಕಾವಲ್ ಬೈರಸಂದ್ರದಲ್ಲಿ ಸುಮಾರು 500ಕ್ಕೂ ಅಧಿಕ ಉದ್ರೀಕ್ತರ ಗುಂಪು ಗಲಭೆ ಸೃಷ್ಟಿಸಿದ್ದು ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪಿ ಹಾಗೂ ದಾಂಧಲೆ ನಡೆಸಿದ 110 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.
ಇನ್ನು ಇಸ್ಲಾಂ ಧರ್ಮದ ಸ್ಥಾಪಕ ಪ್ರವಾದಿ ಪೈಗಂಬರ್ ಕುರಿತು ಅವಹೇಳನಕಾರಿಯಾಗಿ ಫೇಸ್ಬುಕ್ ಪೋಸ್ಟ್ ಮಾಡಿದ್ದ ಎನ್ನಲಾದ ಆರೋಪಿ ನವೀನ್ನನ್ನು ಪೊಲೀಸರು ಮಂಗಳವಾರ ರಾತ್ರಿಯೇ ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಬಗ್ಗೆ ಟ್ವೀಟ್ ಮೂಲಕ ತಿಳಿಸಿರುವ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂಥ್ ಅವರು, ''ಡಿ.ಜೆ ಹಳ್ಳಿ ಘಟನೆಗೆ ಸಂಬಂಧಿಸಿದಂತೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪಿ ನವೀನ್ ನನ್ನು ದಸ್ತಗಿರಿ ಮಾಡಲಾಗಿದೆ. ಜೊತೆಗೆ ಬೆಂಕಿ ಹಚ್ಚಿದ, ಕಲ್ಲು ತೂರಾಟ ನಡೆಸಿದ, ಪೊಲೀಸರ ಮೇಲೆ ಹಲ್ಲೆ ನಡೆಸಿದ ಇತರೆ 110 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ನಗರದಲ್ಲಿ ಶಾಂತಿ ಕಾಪಾಡಲು ಎಲ್ಲರೂ ಪೊಲೀಸರೊಂದಿಗೆ ಸಹಕರಿಸಬೇಕು'' ಎಂದು ವಿನಂತಿಸಿದ್ದಾರೆ.
ಇನ್ನು ಉದ್ರೀಕ್ತರ ಗುಂಪು ದಾಂಧಲೆ ನಡೆಸಿದ ಸಂದರ್ಭಸಲ್ಲಿ ಪೈರಿಂಗ್ ನಡೆಸಲಾಗಿದ್ದು 10 ಕ್ಕೂ ಅಧಿಕ ಮಂದಿಗೆ ಗಲಭೆಕೋರರಿಗೆ ಗುಂಡೇಟು ತಗುಲಿದ್ದು ಈ ಪೈಕಿ 6 ಮಂದಿ ಆಸ್ಪತ್ರೆಯಿಂದ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.
ಇನ್ನು ಗಲಭೆಯಿಂದಾಗಿ ನೂರಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಗಳಿಗೆ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.