ಮೈಸೂರು, ಆ. 12 (DaijiworldNews/MB) : ''ಎಸ್ಡಿಪಿಯ, ಕೆಎಫ್ಡಿ ಪುಂಡರ ಕ್ರಿಮಿನಲ್ ಕೇಸು ವಾಪಾಸ್ ಪಡೆದದ್ದು ತಪ್ಪೆಂದು ಈಗಲಾದರೂ ತಿಳಿಯಿತೆ?'' ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ.
ಬೆಂಗಳೂರಿನಲ್ಲಿ ಕಳೆದ ರಾತ್ರಿ ಕಾವಲಭೈರಸಂದ್ರದಲ್ಲಿ ನಡೆದ ಗಲಭೆ ಮತ್ತು ಅದಕ್ಕೆ ಪ್ರಚೋದನೆ ನೀಡಿದ ಘಟನೆಗಳೆರಡೂ ಖಂಡನೀಯ ಎಂದು ಸಿದ್ದರಾಮಯ್ಯ ಮಾಡಿರುವ ಟ್ವೀಟ್ಗೆ ಪ್ರತಿಕ್ರಿಯೆ ನೀಡಿರುವ ಪ್ರತಾಪ್ ಸಿಂಹ ಅವರು, ''ಎಸ್ಡಿಪಿಐ ಮತ್ತು ಕೆಎಫ್ಡಿಯ 1600 ಪುಂಡರ ವಿರುದ್ಧ ಇದ್ದ 175 ಕ್ರಿಮಿನಲ್ ಕೇಸುಗಳನ್ನು ನೀವು 2015ರಲ್ಲಿ ವಾಪಸ್ಸು ತೆಗೆದುಕೊಂಡಿದ್ದು ತಪ್ಪು ಅಂತ ನಿಮಗೆ ಈಗಲಾದರೂ ಅನ್ನಿಸುತ್ತಿದೆಯೇ ಸಿದ್ದರಾಮಯ್ಯನವರೇ? ಇಷ್ಟಾಗಿಯೂ ಪುಂಡ ಮುಸಲ್ಮಾನರನ್ನು ಖಂಡಿಸಲು ಏಕೆ ನಿಮಗೆ ಮನಸ್ಸು ಬರುತ್ತಿಲ್ಲ ಸಾರ್?'' ಎಂದು ಪ್ರಶ್ನಿಸಿದ್ದಾರೆ.
ಬೆಂಗಳೂರಿನಲ್ಲಿ ಫೇಸ್ಬುಕ್ನಲ್ಲಿ ಇಸ್ಲಾಂ ಧರ್ಮದ ಸ್ಥಾಪಕ ಪ್ರವಾದಿ ಪೈಗಂಬರ್ ಕುರಿತು ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದ ಆರೋಪಿ ನವೀನ್ನನ್ನು ಮಂಗಳವಾರ ರಾತ್ರಿಯೇ ಪೊಲೀಸರು ವಶಕ್ಕೆ ಪಡೆದಿದ್ದು ಈ ಗಲಭೆ, ದಾಂಧಲೆ ಮಾಡಿ ವಾಹನಗಳಿಗೆಲ್ಲ ಕಾರು ಹಾಕಿದ ಹಿನ್ನೆಲೆಯಲ್ಲಿ ಸುಮಾರು 110 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಗಲಭೆ ಸಂದರ್ಭ ಪೊಲೀಸ್ ಫೈರಿಂಗ್ನಿಂದಾಗಿ ಮೂವರು ಸಾವನ್ನಪ್ಪಿದ್ದಾರೆ.