ಬೆಂಗಳೂರು, ಆ. 11, (DaijiworldNews/SM): ಕರ್ನಾಟಕದಲ್ಲಿ ಮತ್ತೆ ಕೊರೊನಾ ಸೋಂಕು ಹೆಚ್ಚಳವಾಗಿದ್ದು, ಬುಧವಾರದಂದು ಅತ್ಯಧಿಕ 7,883 ಪ್ರಕರಣಗಳು ಪತ್ತೆಯಾಗಿವೆ. ಈ ನಡುವೆ ಸೋಂಕಿಗೆ ಬಲಿಯಾದ್ದವರ ಸಂಖ್ಯೆ ನೂರರ ಗಡಿದಾಟಿದೆ.
7,883 ಕೊರೋನಾ ಸೋಂಕು ಪತ್ತೆಯಾಗಿದೆ. ಆ ಮೂಲಕ ರಾಜ್ಯದಲ್ಲಿ ಇಲ್ಲಿಯ ತನಕ ಪತ್ತೆಯಾದ ಒಟ್ಟು ಸೋಂಕಿತರ ಸಂಖ್ಯೆ 1,96,494ಕ್ಕೆ ತಲುಪಿದೆ. ಇನ್ನು ಬುಧವಾರದಂದು 113 ಮಂದಿ ಸೋಂಕಿಗೆ ಬಲಿಯಾಗಿದ್ದು, ಆ ಮೂಲಕ ಒಟ್ಟು ಸವಿನ ಸಂಖ್ಯೆ 3,510ಕ್ಕೆ ತಲುಪಿದೆ.
ಇನ್ನು ಈ ನಡುವೆ ಸೋಂಕಿನಿಂದ ಗುಣಮುಖರಾಗುವವರ ಸಂಖ್ಯೆಯೂ ಕೂಡ ಉತ್ತಮವಾಗಿದೆ. ಬುಧವಾರದಂದು 7,034 ಮಂದಿ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ರಾಜ್ಯದಲ್ಲಿ ಒಟ್ಟು 1,12,633 ಮಂದಿ ಡಿಸ್ಚಾರ್ಜ್ ಆದಂತಾಗಿದೆ.
ಸದ್ಯ 80,343 ಮಂದಿ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.