ಚಿಕ್ಕಮಗಳೂರು, ಆ13 (DaijiworldNews/PY): ಶೃಂಗೇರಿಯಲ್ಲಿ ಶ್ರೀ ಶಂಕರಾಚಾರ್ಯರ ಪ್ರತಿಮೆಯ ಮೇಲೆ ಎಸ್ಡಿಪಿಐ ಧ್ವಜ ಹಾರಿಸಿದ್ದಾರೆ ಎನ್ನುವ ವಿಚಾರ ಬೆಳಕಿಗೆ ಬಂದಿದೆ.
ಬೆಂಗಳೂರಿನ ಗಲಭೆಗೆ ಎಸ್ಡಿಪಿಐ ಮೇಲೆ ಸಂಶಯ ವ್ಯಕ್ತವಾಗಿರುವ ಬೆನ್ನಲ್ಲೇ ಶೃಂಗೇರಿಯ ಶ್ರೀ ಶಂಕರಾಚಾರ್ಯರ ಪ್ರತಿಮೆಯ ಮೇಲೆ ಎಸ್ಡಿಪಿಐ ಧ್ವಜ ಹಾರಿಸಿರುವ ವಿಚಾರ ವಿವಾದಕ್ಕೆ ಗ್ರಾಸವಾಗಿದೆ.
ಈ ವಿಚಾರವಾಗಿ ಟ್ವೀಟ್ ಮಾಡಿರುವ ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಅವರು, ಶೃಂಗೇರಿಯಲ್ಲಿ ಶ್ರೀ ಶಂಕರಾಚಾರ್ಯರ ಪ್ರತಿಮೆಯ ಮೇಲೆ ಎಸ್ಡಿಪಿಐ ಧ್ವಜ ಹಾರಿಸಿದ್ದಾರೆ ಎಂಬ ವಿಷಯ ತಿಳಿದು ಬಂದಿದ್ದು ಜಿಲ್ಲಾ ಪೊಲೀಸ್ ಮುಖ್ಯ ಅಧಿಕಾರಿಗಳಿಗೆ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ. ಕಾನೂನು ಸುವ್ಯವಸ್ಥೆ ಕಾಪಾಡಲು ಎಲ್ಲರೂ ಸಹಕರಿಸಿ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಸಂಸದೆ ಶೋಭಾ ಕರಂದ್ಲಾಜೆ ಅವರು ಟ್ವೀಟ್ ಮಾಡಿದ್ದು, ಎಸ್ಡಿಪಿಐನ ಅಸಹಿಷ್ಣುತೆ ಉತ್ತುಂಗಕ್ಕೇರಿದೆ! ಸಾಮಾಜಿಕ ವಿರೋಧಿ ಚಟುವಟಿಕೆ ತಮ್ಮ ಕೆಟ್ಟ ಕಾರ್ಯಸೂಚಿಗಳನ್ನು ಪ್ರಚಾರ ಮಾಡಲು ಜನರನ್ನು ಪ್ರಚೋದಿಸುತ್ತಿವೆ. ಶೃಂಗೇರಿಯಲ್ಲಿರುವ ಶ್ರೀ ಶಂಕರಾಚಾರ್ಯರ ಪ್ರತಿಮೆಯ ಮೇಲೆ ಎಸ್ಡಿಪಿಐ ಧ್ವಜಗಳನ್ನು ಹಾಕಿರುವ ಘಟನೆಯನ್ನು ನಾನು ಖಂಡಿಸುತ್ತೇನೆ. ಈ ಘಟನೆಯ ಹಿಂದೆ ಇರುವವರ ವಿರುದ್ಧ ಗಂಭೀರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.