ಜೈಪುರ, ಆ 13 (DaijiworldNews/HR) :ಕಾಂಗ್ರೆಸ್ ನ ಸಚಿನ್ ಪೈಲೆಟ್ ಬಣದ ಇಬ್ಬರು ಶಾಸಕರನ್ನು ಅಮಾನತುಗೊಳಿಸಿ ಹೊರಡಿಸಿದ್ದ ಆದೇಶವನ್ನು ವಾಪಸ್ ಪಡೆದಿದ್ದು, ನಾಳೆಯಿಂದ ರಾಜಸ್ಥಾನ ವಿಧಾನ ಸಭೆ ಕಲಪ ಆರಂಭವಾಗುತ್ತಿದೆ.
ಜುಲೈ 17ರಂದು ಕಾಂಗ್ರೆಸ್ ಪಕ್ಷದಿಂದ ಶಾಸಕರಾದ ಬನ್ವಾರ್ ಲಾಲ್ ಶರ್ಮಾ ಮತ್ತು ವಿಶ್ವೇಂದ್ರ ಸಿಂಗ್ರನ್ನು ಪಕ್ಷದಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿತ್ತು. ಇನ್ನು ವಿಧಾನಸಭೆ ಕಲಾಪ ಆರಭವಾಗುವ ಕೆಲವೇ ಗಂಟೆಗಳ ಮೊದಲು ಅಮಾನತು ಆದೇಶ ವಾಪಸ್ ಪಡೆಯಲಾಗಿದೆ.
ಇಬ್ಬರು ಶಾಸಕರು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಜೊತೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಟೇಪ್ ಬಹಿರಂಗವಾಗಿದ್ದ ಆರೋಪದಡಿ ಶಾಸಕರನ್ನು ಅಮಾನತು ಮಾಡಲಾಗಿತ್ತು.
ಈ ಇಬ್ಬರೂ ಶಾಸಕರು ರಾಜಸ್ಥಾನದ ಉಪ ಮುಖ್ಯಮಂತ್ರಿಯಾಗಿದ್ದ ಸಚಿನ್ ಪೈಲೆಟ್ ಬಣದಲ್ಲಿ ಗುರುತಿಸಿಕೊಂಡಿದ್ದರು. ರಾಜ್ಯ ಕಾಂಗ್ರೆಸ್ನಲ್ಲಿನ ಬಿಕ್ಕಟ್ಟು ಈಗ ಬಗೆಹರಿಸಿದೆ. ಆದ್ದರಿಂದ, ಶಾಸಕರ ಅಮಾನತು ಆದೇಶ ವಾಪಸ್ ಆಗಿದೆ.
ಇನ್ನು ಶುಕ್ರವಾರದಿಂದ ರಾಜಸ್ಥಾನ ವಿಧಾನಸಭೆ ಅಧಿವೇಶನ ಆರಂಭವಾಗಲಿದ್ದು, ಪ್ರತಿಪಕ್ಷ ಬಿಜೆಪಿ ಸದನದಲ್ಲಿ ಅವಿಶ್ವಾಸ ನಿರ್ಣಯ ಮಂಡನೆ ಮಾಡಲಾಗುತ್ತದೆ ಎಂದು ಹೇಳಿದೆ. ಅಶೋಕ್ ಗೆಹ್ಲೋಟ್ ಸರ್ಕಾರ ವಿಶ್ವಾಸಮತ ಗೆಲ್ಲಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.