ಶ್ರೀನಗರ, ಆ 14 (DaijiworldNews/HR): ಪೊಲೀಸರು ಗಸ್ತು ತಿರುಗುತ್ತಿದ್ದ ವೇಳೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ ಪರಿಣಾಮ ಇಬ್ಬರು ಪೊಲೀಸರು ಮೃತಪಟ್ಟು ಮತ್ತೊರ್ವ ಪೊಲೀಸ್ ಗಂಭೀರವಾಗಿ ಗಾಯವಾದ ಘಟನೆ ಶ್ರೀನಗರದ ನೌಗಾಮ್ನಲ್ಲಿ ನಡೆದಿದೆ.
ಇನ್ನು ಈ ದಾಳಿಯ ಹಿಂದೆ ಜೈಷ್-ಇ- ಮೊಹಮ್ಮದ್ ಉಗ್ರ ಸಂಘಟನೆಯ ಕೈವಾಡವಿದೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.
ಪೊಲೀಸರು ಶ್ರೀನಗರದಲ್ಲಿ ಗಸ್ತು ತಿರುಗುತ್ತಿದ್ದ ವೇಳೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಮೂರು ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದು, ಅವರಲ್ಲಿ ಇಬ್ಬರು ಮೃತಪಟ್ಟು, ಇನ್ನೊಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಉಗ್ರರು ದಾಳಿ ನಡೆಸಿದ ಸ್ಥಳದಲ್ಲಿ ಇದೀಗ ಭದ್ರತಾ ಪಡೆಗಳು ಸುತ್ತುವರಿದಿದ್ದು,ಕಾರ್ಯಾಚರಣೆ ಆರಂಭಿಸಿದ್ದಾರೆ.
ಉಗ್ರರು ದಾಳಿ ನಡೆಸಿದ ಜಾಗದಲ್ಲಿ ಹೆಚ್ಚು ಜನಸಂಚಾರ ಇದ್ದಕಾರಣ ಪರಿಸ್ಥಿತಿಯನ್ನುಎಚ್ಚರಿಕೆಯಿಂದ ನಿಭಾಯಿಸಬೇಕಾಗಿ ಬಂತ್ತು, ಹಾಗಾಗಿ ಉಗ್ರರನ್ನು ಸೆರೆಹಿಡಿಯಲು ಸಾಧ್ಯವಾಗಲಿಲ್ಲ ಎಂದು ಜಮ್ಮು ಪೊಲೀಸರು ತಿಳಿಸಿದ್ದಾರೆ.