ಚೆನ್ನೈ, ಆ 14 (DaijiworldNews/PY): ಕೊರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಐಸಿಯುಗೆ ಸ್ಥಳಾಂತರಿಸಲಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಎಸ್ಪಿಬಿ ಅವರು ಆ.5ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಆ.13ರ ರಾತ್ರಿ ಅವರ ಆರೋಗ್ಯದ ಸ್ಥಿತಿ ಗಂಭೀರವಾಗಿತ್ತು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿದ್ದವು. ಈಗ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನಡೆಯುತ್ತಿದೆ.
ಕೊರೊನಾ ಸೋಂಕು ದೃಢಪಟ್ಟಿರುವ ಬಗ್ಗೆ ಸ್ವತಃ ಎಸ್ಪಿಬಿ ಅವರು ಕಳೆದ ವಾರ ತಮ್ಮ ಫೇಸ್ಬುಕ್ನಲ್ಲಿ ವಿಡಿಯೋ ಮಾಡಿ ಪೋಸ್ಟ್ ಮಾಡಿದ್ದರು.