ಶಿವಮೊಗ್ಗ, ಆ 15(DaijiworldNews/HR): ಅಯೋಧ್ಯೆ ರಾಮ ಮಂದಿರ ಶಿಲನ್ಯಾಸಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆಯನ್ನು ನೀಡುತ್ತಾರೆ ಆದರೆ ನಾವೇಕೆ ಸಾರ್ವಜನಿಕ ಗಣೇಶೋತ್ಸವ ಮಾಡಬಾರದು ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ರಾಜ್ಯ ಸರ್ಕಾರದ ವಿರುದ್ಧ ಪ್ರಶ್ನಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಕೊರೊನಾ ನೆಪದಲ್ಲಿ ನಮ್ಮ ಧಾರ್ಮಿಕ ಆಚರಣೆಗೆ ಬ್ರೇಕ್ ಹಾಕಲು ಹೊರಟಿದೆ. ಒಂದು ವೇಳೆ ಗಣೇಶೋತ್ಸವಕ್ಕೆ ಅವಕಾಶ ನೀಡದೆ ಹೊದಲ್ಲಿ, ಸಿಎಂ ಯಡಿಯೂರಪ್ಪ ಅವರ ಸರ್ಕಾರ ಉಳಿಯೋದೆ ಇಲ್ಲ ಎಂಬುದಾಗಿ ಭವಿಷ್ಯ ನುಡಿದಿದ್ದಾರೆ.
ಇನ್ನು ಅಯೋಧ್ಯೆಯಲ್ಲಿ ರಾಮಮಂದಿರ ಭೂಮಿ ಪೂಜೆಗೆ ಪ್ರಧಾನಿಯವರು ಅಡಿಗಲ್ಲು ಹಾಕಿದ್ದು, ಶ್ರೀರಾಮನ ಪ್ರತಿಷ್ಠಾಪನೆಯಿಂದ ದೇಶ ಪ್ರಗತಿ ಹೊಂದುತ್ತದೆ ನಿಜ, ಅಂತೆಯೇ ಅಂತೆಯೇ ಗಣಪತಿಯ ಮೂರ್ತಿ ಪ್ರತಿಷ್ಠಾಪನೆಯಿಂದ ನಮ್ಮ ರಾಜ್ಯ ಅಭಿವೃದ್ಧಿಹೊಂದಬಹುದು ಹಾಗಾಗಿ ಗಣೇಶನ ಪ್ರತಿಷ್ಠಾಪನೆಗೆ ವಿಜೃಂಭಣೆಯಿಂದ ಮೆರವಣಿಗೆ ನಡೆಸಲು ಅವಕಾಶ ಕೊಡಿ ಎಂದಿದ್ದಾರೆ.