ನವದೆಹಲಿ, ಆ. 15 (DaijiworldNews/MB) : ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ ಬೆನ್ನಲ್ಲೇ ಸುರೇಶ್ ರೈನಾ ಅವರು ಕೂಡಾ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಗುಡ್ಬೈ ಹೇಳಿದ್ದಾರೆ.
ಈ ಬಗ್ಗೆ ತಮ್ಮ ಇನ್ಸ್ಟಾಗ್ರಾಂ ಮೂಲಕ ತಿಳಿಸಿರುವ ಅವರು, ದೋನಿಯವರ ಹಾದಿಯಲ್ಲೇ ಸಾಗುವುದಾಗಿ ತಿಳಿಸಿದ್ದಾರೆ.
2005ರಲ್ಲಿ ಕ್ರಿಕೆಟ್ ಬದುಕಿಗೆ ಪಾದಾರ್ಪಣೆ ಮಾಡಿದ ಸುರೇಶ್ ರೈನಾ ಅವರು, 226 ಏಕದಿನ ಪಂದ್ಯಗಳನ್ನು ಆಡಿದ್ದು 5,615 ರನ್ ಬಾರಿಸಿದ್ದಾರೆ. ಇನ್ನು 78 ಟಿ20 ಪಂದ್ಯಗಳಲ್ಲಿ 1,605 ರನ್ ಬಾರಿಸಿದ್ದಾರೆ. 19 ಟೆಸ್ಟ್ ಪಂದ್ಯಗಳನ್ನು ಆಡಿರುವ ಅವರು 768 ರನ್ ಬಾರಿಸಿದ್ದಾರೆ.
ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಭಾರತ 2011ರಲ್ಲಿ ವಿಶ್ವಕಪ್ ಜಯಿಸಿದ್ದ ತಂಡದಲ್ಲಿ ಸುರೇಶ್ ರೈನಾ ಅವಿಭಾಜ್ಯ ಅಂಗವಾಗಿದ್ದರು. ಅಲ್ಲದೆ, ಐಪಿಎಲ್ನಲ್ಲಿ ಭಾರತದ ಪರ ಅತಿಹೆಚ್ಚು ರನ್ ಭಾರಿಸಿದ್ದ ಹಿರಿಮೆಯೂ ಇವರದ್ದಾಗಿದೆ.
ಇಂದು "ನನ್ನ ವೃತ್ತಿ ಜೀವನದಲ್ಲಿ ನೀವು ನೀಡಿದ ಪ್ರೀತಿ ಮತ್ತು ಬೆಂಬಲಕ್ಕಾಗಿ ತುಂಬಾ ಧನ್ಯವಾದಗಳು. 1929 ಗಂಟೆಗಳ ಬಳಿಕ ನಾನು ನಿವೃತ್ತಿ ಹೊಂದುತ್ತಿದ್ದೇನೆ" ಎಂದು ಇನ್ಸ್ಟಾಗ್ರಾಂ ಪೋಸ್ಟ್ ಮೂಲಕ ಮಹೇಂದ್ರ ಸಿಂಗ್ ಧೋನಿ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಘೋಷಿಸಿದ್ದರು.