ಬೆಂಗಳೂರು, ಆ (DaijiworldNews/HR): ಕೆ ಜಿ ಹಳ್ಳಿ, ಡಿಜೆ ಹಳ್ಳಿಯಲ್ಲಿ ಮಂಗಳವಾರ ನಡೆದ ಗಲಭೆಗೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಎಸ್ಡಿಪಿಐ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ.
ಗಲಭೆಗೆ ಸಂಬಂಧಿಸಿದಂತೆ ಶನಿವಾರ ತಡರಾತ್ರಿ ಬೆಂಗಳೂರಿನ ಹೆಗಡೆ ನಗರದಲ್ಲಿರುವ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಕಚೇರಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಕಚೇರಿಯಲ್ಲಿದ್ದ 8 ಮಂದಿಯನ್ನು ಬಂಧಿಸಿದ್ದಾರೆ.
ಸಿಸಿಬಿ ಪೊಲೀಸರ ದಾಳಿ ವೇಳೆ ರಾಡ್, ದೊಣ್ಣೆ ಸೇರಿದಂತೆ ಮಾರಕಾಸ್ತ್ರಗಳು ಕಚೇರಿಯಲ್ಲಿ ಪತ್ತೆಯಾಗಿವೆ ಎಂದು ತಿಳಿದುಬಂದಿದೆ.
ಕಾವಲ್ ಭೈರಸಂದ್ರ, ಡಿ. ಜೆ. ಹಳ್ಳಿ, ಕೆ. ಜಿ. ಹಳ್ಳಿಯಲ್ಲಿ ನಡೆದ ಗಲಭೆ ಹಿಂದೆ ಎಸ್ಡಿಪಿಐ ಕೈವಾಡ ಇರುವ ಕುರಿತು ಚರ್ಚೆ ನಡೆಯುತ್ತಿದ್ದಂತೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ರಾಡ್, ದೊಣ್ಣೆ ಸೇರಿದಂತೆ ಮಾರಕಾಸ್ತ್ರಗಳು ಕಚೇರಿಯಲ್ಲಿ ಪತ್ತೆಯಾಗಿವೆ.
ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಗಲಭೆಯ ಹಿಂದೆ ಎಸ್ಡಿಪಿಐ ಸಂಘಟನೆ ಕೈವಾಡವಿದ್ದು ಕರ್ನಾಟಕದಲ್ಲಿ ಈ ಸಂಘಟನೆಯನ್ನು ನಿಷೇಧಿಸಬೇಕು ಎಂದು
ಬಿಜೆಪಿ ನಾಯಕರು ಒತ್ತಾಯಿಸುತ್ತಿದ್ದಾರೆ.