ಕೋಲ್ಕತ್ತಾ,ಆ (DaijiworldNews/HR): ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು ರಾಷ್ಟ್ರಧ್ವಜ ಹಾರಿಸಿದ ವಿಚಾರದಲ್ಲಿ ಜಗಳ ನಡೆದು ಬಿಜೆಪಿ ಕಾರ್ಯಕರ್ತನ ಮೇಲೆ ಟಿಎಂಸಿ ಬೆಂಬಲಿಗರು ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಬಿಜೆಪಿ ಕಾರ್ಯಕರ್ತ ಸುದರ್ಶನ್ ಪ್ರಾಮಾಣಿಕ್ (40) ಹತ್ಯೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.
ನಿನ್ನೆ ಅಪರಾಹ್ನ ಹೂಗ್ಲಿ ಜಿಲ್ಲೆಯ ಖನಕುಲ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಎಂಟು ಮಂದಿಯನ್ನು ಬಂಧಿಸಿದ್ದಾರೆ.
ಎರಡು ಗುಂಪುಗಳ ಮಧ್ಯೆ ಧ್ವಜಾರೋಹಣ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ಕೊಲೆಯಲ್ಲಿ ಅಂತ್ಯವಾಗಿದೆ. ಓರ್ವ ಬಿಜೆಪಿ ಕಾರ್ಯಕರ್ತ ಮೃತಪಟ್ಟಿದ್ದು 8 ಮಂದಿಯನ್ನು ಬಂಧಿಸಿ ತನಿಖೆ ಆರಂಭಿಸಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರು ಶೀಘ್ರ ತನಿಖೆಗೆ ಆಗ್ರಹಿಸಿದ್ದು ಮೃತದೇಹವನ್ನು ಇರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.